ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ “ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ” ಪೊಲೀಸ್ ಉಪ ಆಯುಕ್ತ ಸೇರಿದಂತೆ 10 ಪೊಲೀಸ್ ಅಧಿಕಾರಿಗಳನ್ನು… ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ “ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ” ಪೊಲೀಸ್ ಉಪ ಆಯುಕ್ತ ಸೇರಿದಂತೆ 10 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ ಎಂದು ಚುನಾವಣಾ ಆಯೋಗದ ಮೂಲಗಳು ಸೋಮವಾರ ತಿಳಿಸಿವೆ.
ಡಿಸಿಪಿ(ಉತ್ತರ) ಬೆಂಗಳೂರು, ಯಶವಂತಪುರ ಮತ್ತು ಬೆಂಗಳೂರಿನ ಎಸಿಪಿ ಹಾಗೂ ನಾಲ್ವರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು – ರಾಜರಾಜೇಶ್ವರಿ ನಗರ, ಯಶವಂತಪುರ, ನಂದಿನಿ ಲೇಔಟ್ ಪೊಲೀಸ್ ಠಾಣೆ ಮತ್ತು ರಾಜಗೋಪಾಲ್ ನಗರ ಪೊಲೀಸ್ ಠಾಣೆಯ ತಲಾ ಒಬ್ಬರು ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.
ಇದನ್ನು ಓದಿ: cVIGIL ಆ್ಯಪ್ ನಲ್ಲಿ 3 ಸಾವಿರಕ್ಕೂ ಅಧಿಕ ದೂರು, 161 ಕೋಟಿ ರೂ ನಗದು ವಶಕ್ಕೆ!
ವರ್ಗಾವಣೆಗೊಂಡಿರುವ ಅಧಿಕಾರಿಗಳನ್ನು ರಾಜ್ಯ ಸಚಿವರೊಬ್ಬರ ಇಚ್ಛೆಯ ಮೇರೆಗೆ ನಿಯೋಜಿಸಲಾಗಿದೆ ಮತ್ತು ಅವರ ವರ್ಗಾವಣೆಯಿಂದ ಮೇ 10ರಂದು ನಡೆಯುವ ಚುನಾವಣೆಯ ನೀತಿ ಸಂಹಿತೆಯನ್ನು “ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು” ಸಹಾಯ ಮಾಡುತ್ತದೆ ಎಂದು ಭಾವಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
“ಇದಕ್ಕೆ ಪ್ರತಿಯಾಗಿ ಯಾವುದೇ ದೂರು ದಾಖಲಾಗಿಲ್ಲ. ಹೀಗಾಗಿ ಚುನಾವಣೆಯನ್ನು ಉತ್ತಮವಾಗಿ ನಡೆಸಲು ಆಯೋಗ ಈ ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಕಾರ್ಯಕಾರಿಯೊಬ್ಬರು ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆಯ ನಂತರ, ಪರಿಸ್ಥಿತಿಯನ್ನು ಅಸಮರ್ಪಕವಾಗಿ ನಿಭಾಯಿಸಿದ್ದಕ್ಕಾಗಿ ಸ್ಥಳೀಯ ಡಿಎಸ್ಪಿ ಮತ್ತು ಒಬ್ಬ ಸರ್ಕಲ್ ಇನ್ಸ್‌ಪೆಕ್ಟರ್ ನ್ನು ವರ್ಗಾವಣೆ ಮಾಡಿ ಇಸಿ ಆದೇಶಿಸಿದೆ.