Home Uncategorized ಪಂಚಮಸಾಲಿಗಳ ಹೋರಾಟ: ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ

ಪಂಚಮಸಾಲಿಗಳ ಹೋರಾಟ: ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ

27
0

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆಯವರು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದಾರೆ. ಬೆಳಗಾವಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆಯವರು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದಾರೆ.

ಪಂಚಮಸಾಲಿ ಮೀಸಲು ಹೋರಾಟ ತಾರಕಕ್ಕೆ ಏರಿರುವ ಹಿನ್ನೆಲೆಯಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಹೀಗಾಗಿ ತರಾತುರಿಯಲ್ಲಿ ಮಧ್ಯಂತರ ವರದಿ ತರಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಪಂಚಮಸಾಲಿ ಮೀಸಲಿಗೆ ಆಗ್ರಹಿಸಿ ಸಮುದಾಯದ ಮುಖಂಡರು ಇಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಲಕ್ಷಾಂತರ ಜನರು ಭಾಗವಹಿಸುವ ಸಾಧ್ಯತೆ ಇದೆ. ಈ‌ ಮಧ್ಯೆ ಆಯೋಗ ಸಲ್ಲಿಸಿದ ಮಧ್ಯಂತರ ವರದಿಗೆ ಮಹತ್ವ ಲಭಿಸಿದೆ.

LEAVE A REPLY

Please enter your comment!
Please enter your name here