Home Uncategorized ಪಕ್ಷಕ್ಕೆ ಬಹುಮತ ಖಚಿತ, ಇದರಲ್ಲಿ ಯಾವುದೇ ಸಂದೇಹಗಳಿಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ  (ಸಂದರ್ಶನ)

ಪಕ್ಷಕ್ಕೆ ಬಹುಮತ ಖಚಿತ, ಇದರಲ್ಲಿ ಯಾವುದೇ ಸಂದೇಹಗಳಿಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ  (ಸಂದರ್ಶನ)

24
0

ಶಿಕಾರಿಪುರದ ಬಿಜೆಪಿ ಅಭ್ಯರ್ಥಿಯಾಗಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಈಗಾಗಲೇ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿದ್ದು, ಇದೀಗ ಮತ್ತೊಮ್ಮೆ ಪ್ರವಾಸ ಕೈಗೊಂಡು, ತಳಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ. ಶಿಕಾರಿಪುರ: ಶಿಕಾರಿಪುರದ ಬಿಜೆಪಿ ಅಭ್ಯರ್ಥಿಯಾಗಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಈಗಾಗಲೇ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿದ್ದು, ಇದೀಗ ಮತ್ತೊಮ್ಮೆ ಪ್ರವಾಸ ಕೈಗೊಂಡು, ತಳಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ.

ಬೂತ್ ಮಟ್ಟದ ಕಾರ್ಯಕರ್ತರನ್ನು ಭೇಟಿ ಮಾಡಲು ಗ್ರಾಮಗಳಿಗೆ ಭೇಟಿ ನೀಡುತ್ತಿದ್ದ ಸಂದರ್ಭದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ವಿಜಯೇಂದ್ರ ಅವರು, ಚುನಾವಣಾ ಸಿದ್ಧತೆ ಹಾಗೂ ಪ್ರಚಾರ ಕುರಿತ ಕೆಲ ಪ್ರಶ್ನೆಗಳಿಗೆ ಉತ್ತರಿಸಿ, ಮಾಹಿತಿ ನೀಡಿದರು.

ಎಸ್‌ಸಿಗಳಿಗೆ ಒಳಮೀಸಲಾತಿ ವಿಚಾರಕ್ಕೆ ಬಂಜಾರ ಸಮುದಾಯ ವಿರೋಧ ವ್ಯಕ್ತಪಡಿಸಿದ್ದು, ಈ ಪ್ರತಿಭಟನೆ ನಿಮ್ಮ ಗೆಲುವಿಗೆ ಅಡ್ಡಿಯಾಗಲಿದೆಯೇ?
ಅಂತಹ ಪ್ರಶ್ನೆಗಳು ಉದ್ಭವಿಸುವುದೇ ಇಲ್ಲ. ವಿರೋಧ ಪಕ್ಷಗಳು ಇಂತಹ ಗೊಂದಲ ಸೃಷ್ಟಿಸಲು ಯತ್ನಿಸಿವೆ, ನಮ್ಮ ಕಾರ್ಯಕರ್ತರು ಬಂಜಾರ ಸಮುದಾಯದ ಜನರನ್ನು ಸಂಪರ್ಕಿಸುತ್ತಿದ್ದಾರೆ. ಬೊಮ್ಮಾಯಿ ಸರ್ಕಾರದ ನಿರ್ಧಾರದಿಂದ ಬಂಜಾರರಿಗೆ ಅನುಕೂಲವಾಗಲಿದೆ. ಆದರೆ, ಪ್ರತಿಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರದ ನಿರ್ಧಾರ ಆಘಾತವನ್ನು ತಂದಿದೆ. ಶಿಕಾರಿಪುರದಲ್ಲಿ ರಾಜಕೀಯದಲ್ಲಿ ಮಾಡುತ್ತಿದೆ. ಆದರೆ, ಅವರ ಈ ಯತ್ನ ಯಶಸ್ವಿಯಾಗುವುದಿಲ್ಲ. ಶಿಕಾರಿಪುರ ಬಿಜೆಪಿಯ ಭದ್ರಕೋಟೆಯಾಗಿದ್ದು, ಅದು ಹಾಗೆಯೇ ಉಳಿಯಲಿದೆ.

ಬಿಜೆಪಿ ಎಷ್ಟು ಸ್ಥಾನಗಳನ್ನು ಗೆಲ್ಲಬಹುದೆಂದು ನೀವು ಭಾವಿಸುತ್ತೀರಿ?
ನಮಗೆ ಸ್ಪಷ್ಟ ಬಹುಮತ ಸಿಗುವ ವಿಶ್ವಾಸವಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ, ಅಧಿಕಾರಕ್ಕೆ ಬಂದರೆ ಅದು ಬಿಜೆಪಿ ಮಾತ್ರ.

ವರುಣಾದಿಂದ ಸ್ಪರ್ಧಿಸಲು ಸಿದ್ಧರಿದ್ದೀರಾ?
ಈ ಬಗ್ಗೆ ನನ್ನ ತಂದೆ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರು ನಾನು ವರುಣಾದಿಂದ ಸ್ಪರ್ಧಿಸಬೇಕೆಂದು ಬಯಸುತ್ತಿದ್ದಾರೆ. ಆದರೆ, ಶಿಕಾರಿಪುರದ ಪಕ್ಷದ ಕಾರ್ಯಕರ್ತರು ಇಲ್ಲಿಂದ ಸ್ಪರ್ಧಿಸಲು ಆಹ್ವಾನ ನೀಡಿದಾಗ ಅವರ ಭಾವನೆಗಳಿಗೆ ಗೌರವ ಕೊಡುವುದು ನನ್ನ ಕರ್ತವ್ಯ. ಈ ಬಗ್ಗೆ ಪಕ್ಷ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದು, ನಾಲ್ಕೈದು ದಿನಗಳಲ್ಲಿ ಸ್ಪಷ್ಟ ಮಾಹಿತಿಗಳು ತಿಳಿದುಬರಲಿದೆ.

ಲಿಂಗಾಯತರು ಬಿಜೆಪಿಗೆ ಮತ ಹಾಕುವುದನ್ನು ಮುಂದುವರಿಸುತ್ತಾರೆ ಎಂದು ನೀವು ಭಾವಿಸುತ್ತೀರಾ?
ಯಡಿಯೂರಪ್ಪ ಅವರನ್ನು ಯಾರೂ ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದಿಲ್ಲ ಮತ್ತು ಎಲ್ಲಾ ಸಮುದಾಯದ ಜನರು ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ. ಅಲ್ಪಸಂಖ್ಯಾತರು ಕೂಡ ಯಡಿಯೂರಪ್ಪ ಮತ್ತು ನನ್ನ ಸಹೋದರ ಬಿವೈ ರಾಘವೇಂದ್ರ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ ಮತ್ತು ಯಾವುದೇ ಉದ್ವಿಗ್ನತೆ ಇಲ್ಲದಂತೆ ನೋಡಿಕೊಂಡಿದ್ದಾರೆಂದು ಹೇಳಿದರು.

LEAVE A REPLY

Please enter your comment!
Please enter your name here