Home Uncategorized ಪಕ್ಷ ಸೋತಿದ್ದರಿಂದ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು, ಯಾವ ನಾಯಕನೂ ಅಲ್ಲ!

ಪಕ್ಷ ಸೋತಿದ್ದರಿಂದ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು, ಯಾವ ನಾಯಕನೂ ಅಲ್ಲ!

48
0

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಭರ್ಜರಿ ಗೆಲವು ಸಾಧಿಸಿದ್ದು, ಡಬಲ್​ ಇಂಜಿನ್​ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಭರ್ಜರಿ ಗೆಲವು ಸಾಧಿಸಿದ್ದು, ಡಬಲ್​ ಇಂಜಿನ್​ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ.

ಈ ವಿಚಾರದ ಕುರಿತಾಗಿ ಸಂಸದ ಪ್ರತಾಪ್ ಸಿಂಹ ಸೋಶಿಯಲ್​​ ಮೀಡಿಯಾ ಮೂಲಕವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ ಬಿಜೆಪಿ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ, ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಪಕ್ಷ ಸೋತು ಅನಾಥವಾಗಿರುವುದು, ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದಿದ್ದಾರೆ.

ಅಲ್ಲದೇ ಯಾರದ್ದೋ ವೈಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ ಎಂದು ಸಂಸದ  ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗು ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಪಕ್ಷ ಸೋತು ಅನಾಥವಾಗಿರುವುದು, ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ. 1/2
— Pratap Simha (@mepratap) May 18, 2023

LEAVE A REPLY

Please enter your comment!
Please enter your name here