ತೆರಿಗೆ ಪಾವತಿಸುವ ಕುಟುಂಬದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2,000 ರೂಪಾಯಿ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರು: ತೆರಿಗೆ ಪಾವತಿಸುವ ಕುಟುಂಬದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2,000 ರೂಪಾಯಿ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ರೂಪಿಸಿರುವ ’ಗೃಹಲಕ್ಷ್ಮಿ‘ ನಿಯಮಗಳಲ್ಲಿ ಫಲಾನುಭವಿಯ ಪತಿ ಅಥವಾ ಪುತ್ರ ತೆರಿಗೆ ಪಾವತಿದಾರರಾಗಿದ್ದರೆ ಮಹಿಳೆಗೆ ಯೋಜನೆಯ ಲಾಭ ಸಿಗುವುದಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಇಂತಹ 10 ಲಕ್ಷ ಮಹಿಳೆಯರು ಇದ್ದಾರೆ. ಅವರನ್ನೂ ಯೋಜನೆ ವ್ಯಾಪ್ತಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿನಂತಿಸಲಾಗಿದೆ. ಮುಂದಿನ ದಿನಗಳಲ್ಲಿ ಯೋಜನೆ ವಿಸ್ತರಿಸುವ ಭರವಸೆ ನೀಡಿದ್ದಾರೆ.
ಯಜಮಾನಿಯ ಮಕ್ಕಳು ತೆರಿಗೆ ಪಾವತಿಸಿದರೆ ಆ ಕುಟುಂಬಕ್ಕೆ ಗೃಹಲಕ್ಷ್ಮೀ ಯೋಜನೆ ಸಿಗಲ್ಲ. ಪತಿ, ಪತ್ನಿ ಇಬ್ಬರಲ್ಲಿ ಒಬ್ಬರು ತೆರಿಗೆ ಪಾವತಿಸಿದರೆ ಯೋಜನೆ ಅನ್ವಯಿಸಲ್ಲ. ಈ ಸಂಬಂಧ ಈಗಾಗಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದಿದ್ದಾರೆ.
ಗೃಹಜ್ಯೋತಿಗೆ ಆ.1 ರಂದು ಕಲಬುರಗಿಯಲ್ಲಿ, ಗೃಹಲಕ್ಷ್ಮಿಗೆ ಆ.17 ಅಥವಾ 18ರಂದು ಬೆಳಗಾವಿ ಯಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಯೋಜನೆಗಳ ಅನುಷ್ಠಾನ ಕುರಿತು ಉನ್ನತಮಟ್ಟದ ಸಭೆ ನಡೆಸಿದ ನಂತರ ಅವರು ಮಾತನಾಡಿದರು.