Home Uncategorized ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್‌: ಲಾಂಛನ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್‌: ಲಾಂಛನ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

32
0

ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ) ಮತ್ತು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ 2024 ಜನವರಿ 5ರಿಂದ 7ರ ತನಕ 3ದಿನಗಳ ಕಾಲ ಮಂಗಳೂರಿನ ಹೊರವಲಯದ ಆಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್‌ನ ಕೆಯುಡಬ್ಲ್ಯುಜೆ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024’ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಜನವರಿ 5ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಯಿತು.

ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ 2020ರಲ್ಲಿ 35ನೇ ರಾಜ್ಯ ಸಮ್ಮೇಳನವನ್ನು ನಡೆಸಲಾಗಿತ್ತು. ಈಗ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟವನ್ನು ಸಂಘಟಿಸಲಾಗುತ್ತಿದೆ ಎಂಬ ವಿಚಾರವನ್ನು ಅವರ ಗಮನಕ್ಕೆ ತರಲಾಯಿತು.

ಲಾಂಛನ ಅನಾವರಣ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೇಶ್ ದಡ್ಡಂಗಡಿ, ರಾಜೇಶ್ ಶೆಟ್ಟಿ, ಸಂದೇಶ್ ಜಾರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here