ಕ್ಷುಲ್ಲಕ ಕಾರಣವಾದ ಪರಸ್ಪರ ಸಂಘರ್ಷ ಕೊಲೆಯಲ್ಲಿ ಅಂತ್ಯವಾಗಿದ್ದು, ಕರ್ನಾಟಕದಲ್ಲಿ ಒಡಿಶಾದ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮಂಗಳೂರು: ಕ್ಷುಲ್ಲಕ ಕಾರಣವಾದ ಪರಸ್ಪರ ಸಂಘರ್ಷ ಕೊಲೆಯಲ್ಲಿ ಅಂತ್ಯವಾಗಿದ್ದು, ಕರ್ನಾಟಕದಲ್ಲಿ ಒಡಿಶಾದ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಕೆಲಸದ ವಿಚಾರವಾಗಿ ಸಹ ಕಾರ್ಮಿಕನ ಜೊತೆ ಜಗಳ ನಡೆದು ಕಟ್ಟಡ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
ಇದನ್ನೂ ಓದಿ: ಚಿತ್ರಹಿಂಸೆ ತಾಳಲಾರದೆ ಮದ್ಯವ್ಯಸನಿ ಮಗನಿಗೆ ಬೆಂಕಿ ಹಚ್ಚಿ ಕೊಂದ ತಾಯಿ
ಪೊಲೀಸ್ ಮೂಲಗಳ ಪ್ರಕಾರ ಒಡಿಶಾ ಮೂಲದ ಗಣೇಶ್ (50 ವರ್ಷ)ಕೊಲೆಯಾಗಿದ್ದು, ಈತ ಕಟಪಾಡಿ-ಶಿರ್ವ ರಸ್ತೆಯ ಬಳಿ ಕಟ್ಟಡ ಕಾಮಗಾರಿಯಲ್ಲಿ ನಿರತರಾಗಿದ್ದರು. ಸೋಮವಾರ ರಾತ್ರಿ ಕೆಲಸ ಸಂಬಂಧಿತ ವಿಚಾರದಲ್ಲಿ ಇಬ್ಬರು ಕಾರ್ಮಿಕರು ಜಗಳ ಮಾಡಿಕೊಂಡಿದ್ದರು. ಈ ವೇಳೆ ನಡೆದ ಘರ್ಷಣೆಯಲ್ಲಿ ಗಣೇಶ್ ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಸಹ ಕಾರ್ಮಿಕರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ
ಆರೋಪಿ ಕಾರ್ಮಿಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.