ದುಬೈ: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ಮಾಡಿ ದೇಶದ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿಯನ್ನು ಕೊಂದ ನಂತರ ಭಾನುವಾರ ಪಾಕಿಸ್ತಾನದ ಬಂದರು ನಗರವಾದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸಕ್ಕೆ ನುಗ್ಗಿದ ನೂರಾರು ಜನರು, ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದು, ಅಶ್ರುವಾಯು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮೊಹಮ್ಮದ್ ಜವಾದ್ ಹೇಳಿದ್ದಾರೆ.
ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ ಒಬ್ಬ ಪ್ರತಿಭಟನಾಕಾರ ಸಾವಿಗೀಡಾಗಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.
ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಪ್ರಮುಖ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಸಾವಿಗೀಡಾದ ಕೆಲವೇ ಗಂಟೆಗಳ ನಂತರ ಕಾನ್ಸುಲೇಟ್ ಮೇಲೆ ದಾಳಿ ನಡೆದಿದೆ.
