ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳ್ಳುವವರೆಗೆ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರಿಗೆ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಈ ಸಂದರ್ಭ ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ್ದರು. ಇದು FSL ವರದಿಯಲ್ಲೂ ಸಹ ದೃಢಪಟ್ಟಿದೆ. ಈ ಸಂಬಂಧ ಪೊಲೀಸರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ತನಿಖೆ ಪೂರ್ಣಗೊಳ್ಳುವವರೆಗೆ ನಾಸಿರ್ ಹುಸೇನ್ ಅವರಿಗೆ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತ ಅಧಿಕಾರಿಗಳು ಮನವಿ ಮಾಡಿದ್ದಾರೆ.