ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸೋಲಾರ್ ಪಾರ್ಕ್ ವಿಸ್ತರಣೆಗೆ ಸರ್ಕಾರ ಬದ್ಧವಾಗಿದ್ದು, 10,000 ಎಕರೆ ಭೂಮಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ. ತುಮಕೂರು: ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸೋಲಾರ್ ಪಾರ್ಕ್ ವಿಸ್ತರಣೆಗೆ ಸರ್ಕಾರ ಬದ್ಧವಾಗಿದ್ದು, 10,000 ಎಕರೆ ಭೂಮಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.
ನಿನ್ನೆಯಷ್ಟೇ ತುಮಕೂರಿನ ಪಾವಗಡ ತಾಲೂಕು ತಿರುಮಣಿಯಲ್ಲಿರುವ ಏಷ್ಯಾದ ಅತಿದೊಡ್ಡ ಸೋಲಾರ್ ಪಾರ್ಕ್’ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ರೈತರು ತಮ್ಮ ಭೂಮಿಯನ್ನು ಬಿಟ್ಟುಕೊಡಲು ಸಿದ್ಧರಾಗಿದ್ದೇ ಆದರೆ, ಅದು ಅವರಿಗೆ ಮಾತ್ರವಲ್ಲ ಸೌರ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರಕ್ಕೂ ಸಹಾಯ ಮಾಡುತ್ತದೆ. ಪಾವಗಡದಲ್ಲಿ ಸೋಲಾರ್ ಪಾರ್ಕ್ ಉದ್ಘಾಟನೆಯಾದಾಗ ಏಷ್ಯಾದಲ್ಲೇ ಅತಿ ದೊಡ್ಡ ಸೋಲಾರ್ ಪಾರ್ಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ, ಇಂದು ಆ ಹೆಗ್ಗಳಿಕೆ ಇಲ್ಲ. ಮತ್ತೊಮ್ಮೆ ಈ ಸೋಲಾರ್ ಪಾರ್ಕ್’ನ್ನು ನಂಬರ್ 1 ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಅದಕ್ಕಾಗಿ ಸೋಲಾರ್ ಪಾರ್ಕ್ ವಿಸ್ತರಣೆ ಮಾಡಬೇಕಾಗಿದೆ ಎಂದು ಹೇಳಿದರು.
ಸೋಲಾರ್ ಪ್ಯಾನೆಲ್‌ನಿಂದಾಗಿ ರೈತರು ಆರೋಗ್ಯ ಸಮಸ್ಯೆಯಿಂದ ಎದುರಿಸುತ್ತಿರುವ ಬಗ್ಗೆ ಪ್ರತಿಕ್ರಿಯಿ, ಇದು ಕೇವಲ ಅಪನಂಬಿಕೆಗಳಷ್ಟೇ ಎಂದು ತಿಳಿಸಿದರು.
ಇದಕ್ಕೂ ಡಿಕೆ.ಶಿವಕುಮಾರ್ ಹಾಗೂ ಕೆಜೆ ಜಾರ್ಜ್ ಇಬ್ಬರು ಸೋಲಾರ್ ಪಾರ್ಕ್‌ನ ವೈಮಾನಿಕ ಸಮೀಕ್ಷೆ ನಡೆಸಿ, ನಂತರ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯುತ್ ಉತ್ಪಾದನೆ ಕುರಿತು ಅವಲೋಕನ ನಡೆಸಿದರು.
ಪ್ರಸರಣ ಮತ್ತು ವಿತರಣಾ ನಷ್ಟದ ಬಗ್ಗೆ ತಿಳಿದ ಜಾರ್ಜ್ ಅವರು, ಕೂಡಲೇ ಸಮಸ್ಯೆಯನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.