ಪುತ್ತೂರು, ಜೂ.18: ನಗರ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡ ಘಟನೆ ಇಂದು ಪೂರ್ವಾಹ್ನ 11 ಗಂಟೆ ಸುಮಾರಿಗೆ ಸಂಭವಿಸಿದೆ.
ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ.
ಫ್ರಿಡ್ಜ್ ಸ್ಫೋಟಗೊಂಡಿದ್ದರಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ಮನೆಯಲ್ಲಿ ಯಾರು ಇಲ್ಲದಿದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.