Home Uncategorized ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು: ಸಿಸಿಬಿ ಪೊಲೀಸರಿಂದ ಬಂಧನ

ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು: ಸಿಸಿಬಿ ಪೊಲೀಸರಿಂದ ಬಂಧನ

19
0

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿ ಕಳೆದ ತಡರಾತ್ರಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 
ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 
32 ವರ್ಷದ ಪುನೀತ್ ಕೆರೆಹಳ್ಳಿ ಬೆಂಗಳೂರಿನ ಜೆಪಿ ನಗರ ನಿವಾಸಿಯಾಗಿದ್ದು, ಮೂಲತಃ ಹಾಸನದವನು. ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ನಡೆಸುತ್ತಿದ್ದು, ಆ ಮೂಲಕ ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದರು ಎಂದು ಮಾಹಿತಿ ನೀಡಲಾಗಿದೆ.
ಪುನೀತ್‌ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ವಿಜಯನಗರ ಜಿಲ್ಲೆಯ ಹಂಪಿ ಟೂರಿಸಂ ಪೊಲೀಸ್‌ ಠಾಣೆ, ರಾಮನಗರ ಜಿಲ್ಲೆಯ ಸಾತನೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಪ್ರಕರಣಗಳು ದಾಖಲಾಗಿವೆ. 
ಇತ್ತೀಚೆಗೆ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಸಾಯಿಸಿದ್ದರು ಎಂದು ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಲಯದ ಜಾಮೀನಿನ ಮೇಲೆ ಬಿಡುಗಡೆಯಾಗಿತ್ತು.
 

LEAVE A REPLY

Please enter your comment!
Please enter your name here