Home Uncategorized ಪೋಷಕರ ಜತೆ ಕೂಲಿಗಾಗಿ ಹಾಸನಕ್ಕೆ ಬಂದಿದ್ದ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು...

ಪೋಷಕರ ಜತೆ ಕೂಲಿಗಾಗಿ ಹಾಸನಕ್ಕೆ ಬಂದಿದ್ದ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಅರೆಸ್ಟ್

14
0

ಹಾಸನ: 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಾಗಿದೆ. ಸದ್ಯ ಪೊಲೀಸರು ಮೂವರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜತೆ ಇದ್ದ ಬಾಲಕಿ ತೋಟಕ್ಕೆ ಬಂದಿದ್ದಾಗ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಾಗಿದೆ. ಸಂತ್ರಸ್ತ ಬಾಲಕಿಗೆ ರಕ್ಷಣೆ ನೀಡಿ ಆರೋಪಿಗಳ ಬಂಧನಕ್ಕೆ ಕ್ರಮ ವಹಿಸಿರೋ ಮಕ್ಕಳ ರಕ್ಷಣಾ ಸಮಿತಿ ಸದಸ್ಯರು, ಪೋಷಕರು ಹಾಗು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರು ಆಧರಿಸಿ ಎಫ್.ಐ.ಆರ್ ದಾಖಲಿಸಿಕೊಂಡಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಮೂವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here