ಮಂಡ್ಯದಲ್ಲಿ ಇತ್ತೀಚೆಗೆ ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರತ್ತ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಂಡ್ಯ: ಮಂಡ್ಯದಲ್ಲಿ ಇತ್ತೀಚೆಗೆ ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರತ್ತ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ಬಸ್ಸಿನಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಹೋಗುತ್ತಿದ್ದ ವೇಳೆ ಡಿ.ಕೆ.ಶಿವಕುಮಾರ್ ಕಲಾವಿದರತ್ತ 500ರ ನೋಟುಗಳನ್ನು ಎರಚಿದ್ದರು. ಈ ಬಗ್ಗೆ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ದಾಖಲಿಸಿದ್ದರು. ಎನ್ ಸಿ ಆರ್ ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಈಗ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ಬಸ್ಸಿನಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಹೋಗುತ್ತಿದ್ದ ವೇಳೆ ಡಿ.ಕೆ.ಶಿವಕುಮಾರ್ ಕಲಾವಿದರತ್ತ 500ರ ನೋಟುಗಳನ್ನು ಎರಚಿದ್ದರು. ಈ ಬಗ್ಗೆ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ದಾಖಲಿಸಿದ್ದರು. ಕೋರ್ಟ್ ಆದೇಶದಂತೆ ಈಗ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.… pic.twitter.com/Hyb0cpWhrJ— kannadaprabha (@KannadaPrabha) April 4, 2023
ಬೇವಿನಹಳ್ಳಿಯಲ್ಲಿ ನಡೆದ ರ್ಯಾಲಿಯಲ್ಲಿ ಬಸ್ಸಿನ ಮೇಲಿನಿಂದ ನೋಟಿನ ಕಂತೆಯನ್ನು ಎಸೆದಿದ್ದಕ್ಕಾಗಿ ಸೆಕ್ಷನ್ 171ಇ ಅಡಿಯಲ್ಲಿ ಪೊಲೀಸರು ಲಂಚ ನೀಡಿದ ಆರೋಪದ ಮೇಲೆ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.