Home Uncategorized ಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಎಂದ ಅಜೀಂ ಪ್ರೇಮ್​ ಜಿ ವಿವಿ...

ಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಎಂದ ಅಜೀಂ ಪ್ರೇಮ್​ ಜಿ ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

21
0

ಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದನ್ನು ಸುಳ್ಳು ಎಂದ ಅಜಿಂ ಪ್ರೇಮ್​ ಜಿ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದನ್ನು ಸುಳ್ಳು ಎಂದ ಅಜಿಂ ಪ್ರೇಮ್​ ಜಿ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ದಿನಗಳಿಂದ ಕ್ಯಾಂಪಸ್ ಒಳಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ವಿವಿ ಆಡಳಿತ ಮಂಡಳಿ ಸ್ಪಂದಿಸದ ಹಿನ್ನೆಲೆ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನೂ ಆರಂಭಿಸಿದ್ದರು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಭಿಜಿತ್ ಎಂಬ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿದ್ದ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಅಜಿಂ ಪ್ರೇಮ್​ ಜಿ ವಿವಿ, ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಮೃತಪಟ್ಟಿರುವುದು ದುರದೃಷ್ಟಕರ ಸಂಗತಿ. ಘಟನೆಯಿಂದ ನಾವು ಆಘಾತಕ್ಕೊಳಗಾಗಿದ್ದೇವೆ ಮತ್ತು ತೀವ್ರ ದುಖಃವಾಗಿದೆ. ಆದರೆ, ವಿದ್ಯಾರ್ಥಿ ಉಪವಾಸ ಪ್ರತಿಭಟನೆಯಲ್ಲಿ ಮೃತಪಟ್ಟಿಲ್ಲ. ವಿದ್ಯಾರ್ಥಿ ಉಪವಾಸ ಸತ್ಯಗ್ರಹ ವೇಳೆ ಮೃತಪಟ್ಟಿದ್ದಾನೆ ಎನ್ನುವುದು ಸುಳ್ಳು ಎಂದು ಹೇಳಿತ್ತು. ಈ ಹೇಳಿಕೆಗೆ ಇದೀಗ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here