ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಕಿರುಕುಳ ಅನುಭವಿಸಿದ ಯಾರಾದರೂ ಸಂತ್ರಸ್ತರಿದ್ದರೆ ದೂರು ನೀಡಲು ಎಸ್‌ಐಟಿ ಸಹಾಯವಾಣಿಯೊಂದನ್ನು ಆರಂಭಿಸಿದೆ.
ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯರು 6360938947 ಸಹಾಯ ವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು ಎಂದು ಎಸ್‌ಐಟಿ ತಿಳಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಎಸ್‌ಐಟಿ, ಸಂತ್ರಸ್ತರು ತನಿಖಾ ತಂಡಕ್ಕೆ ಕರೆ ಮಾಡಿಯೂ ಮಾಹಿತಿ ನೀಡಬಹುದು ಎಂದು ತಿಳಿಸಿದೆ. ಅಲ್ಲದೆ, ಮಾಹಿತಿ ನೀಡಿದ ಸಂತ್ರಸ್ತರ ಹೆಸರನ್ನು ಗೌಪ್ಯವಾಗಿಡುದಾಗಿ ಹೇಳಿದೆ.