ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರು ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಬಾಗಲಕೋಟೆಯಲ್ಲಿ ಮಾಧ್ಯಮ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್ಪೋರ್ಟ್ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರಕಾರವೇ ರಕ್ಷಣೆ ಮಾಡುತ್ತಿದೆ ಎಂದು ಆರೋಪಿಸಿದರು.
ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು, ಪ್ರಜ್ವಲ್ ನನ್ನ ಮಗ ಅಂತಿದ್ದರು. ಈಗ ಏನು ಹೇಳುತ್ತಾರೆ. ಪ್ರಜ್ವಲ್ ಲೈಂಗಿಕ ಹಗರಣ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು ಎಂದು ಕೇಳಿದರು.
