Home ಕರ್ನಾಟಕ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ | ಸಂತ್ರಸ್ತೆಯಿಂದ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ: ಸಚಿವ...

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ | ಸಂತ್ರಸ್ತೆಯಿಂದ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ: ಸಚಿವ ಪರಮೇಶ್ವರ

25
0

ಬೆಂಗಳೂರು, ಮೇ 3: ಸಂಸದ ಪ್ರಜ್ವಲ್ ರೇವಣ್ಣರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಸದಾಶಿವನ ಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸಂತ್ರಸ್ತ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಎಸ್ಐಟಿಯವರು ಒತ್ತಾಯಪೂರ್ವಕವಾಗಿ ಆಕೆಯಿಂದ ಸ್ಟೇಟ್ ಮೆಂಟ್ ಪಡೆದುಕೊಂಡಿದ್ದಾರೆ ಎಂಬ ಆರೋಪ ಯಾರಿಂದಲೂ ಬರಬಾರದು. ಹೀಗಾಗಿ ಮ್ಯಾಜಿಸ್ಟ್ರೇಟ್ ಮುಂದೆಯೇ 164 ಅಡಿ ಹೇಳಿಕೆ ಕೊಡಿಸಲಾಗಿದೆ ಎಂದರು.

ಪ್ರಜ್ವಲ್ ರೇವಣ್ಣಗೆ 41A ಅಡಿಯಲ್ಲಿ ನೋಟಿಸ್ ಕೂಡಲಾಗಿದೆ. ಪ್ರಜ್ವಲ್ ಪರ ವಕೀಲ ಕಾಲಾವಕಾಶ ಕೇಳಿದ್ದಾರೆ. ಇದಕ್ಕೆ ಅವಕಾಶವಿಲ್ಲ ಎಂಬುದನ್ನು ತಿಳಿಸಿದ್ದೇವೆ. ರೇವಣ್ಣರಿಗೂ ಕೂಡ 41A ಅಡಿ ನೊಟೀಸ್ ನೀಡಲಾಗಿದೆ. ರೇವಣ್ಣ ಸಹ 24 ಗಂಟೆ ಕಾಲಾವಕಾಶ ಕೇಳಿದ್ದಾರೆ. ಕಾನೂನು ಪ್ರಕಾರ ಮತ್ತೊಂದು ನೊಟೀಸ್ ನೀಡಿದ್ದೇವೆ. ಇದಕ್ಕೆ ಸ್ಪಂದಿಸದಿದ್ದರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಜ್ವಲ್ ರೇವಣ್ಣ ಕುರಿತು ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ. ಎಲ್ಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಫೋಟೋ ಸಮೇತ ನೋಟಿಸ್ ಕಳುಹಿಸಲಾಗಿದೆ. ನಿಯಮಾನುಸಾರದ ಪ್ರಕಾರವೇ ಲುಕ್ ಔಟ್ ನೋಟಿಸ್ ನೀಡಿದ್ದೇವೆ ಎಂದು ಹೇಳಿದರು.

ರೇವಣ್ಣರ ಮನೆ ಮೇಲೆ ಎಸ್ಐಟಿ ದಾಳಿ ನಡೆಸಿರುವುದು ಗೊತ್ತಿಲ್ಲ. ಪ್ರಜ್ವಲ್ ರೇವಣ್ಣ ದುಬೈಗೆ ಹೋಗಿರುವುದು ಗೊತ್ತಿಲ್ಲ. ಜರ್ಮನಿಗೆ ಹೋಗಿದ್ದಾರೆ ಎಂಬ ಮಾಹಿತಿ ಇದೆ. ಜರ್ಮನಿಯಿಂದ ಕರೆತರಲು ಕೇಂದ್ರ ಸರಕಾರದ ನೆರವು ಬೇಕು. 2ನೇ ನೋಟಿಸ್ಗೂ ಸ್ಪಂದಿಸದಿದ್ದರೆ ಮುಂದಿನ ತೀರ್ಮಾನ ಏನು ಎಂಬುದನ್ನು ಎಸ್ಐಟಿಯವರು ಕೈಗೊಳ್ಳುತ್ತಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here