ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣದ ಆರೋಪದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಜೆಡಿಎಸ್ ನಿಯೋಗ ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿತು.
ಅಲ್ಲದೆ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ.ಕುಮಾರಸ್ವಾಮಿ ನೇತೃತ್ವದಲ್ಲಿನ ನಿಯೋಗವು ಹಾಸನ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
