Home Uncategorized ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

33
0

ಕೋಟ: ಬೆಂಗಳೂರಿನಲ್ಲಿ ಹೊಟೆಲ್ ಕೆಲಸ ಮಾಡಿಕೊಂಡಿದ್ದ ಬಿಲ್ಲಾಡಿ ಗ್ರಾಮದ ನಾಗಮಣಿ ಎಂಬವರ ಮಗ ಕಾರ್ತಿಕ್(26) ಎಂಬವರು ವೈಯಕ್ತಿಕ ಕಾರಣಕ್ಕೆ ಮನನೊಂದು ಡಿ.27ರಂದು ಬಿಲ್ಲಾಡಿ ಗ್ರಾಮದ ಬನ್ನೇರಳ ಕಟ್ಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕರ್ಜೆಯ ಸುರೇಂದ್ರ (42) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ಡಿ.27 ರಂದು ರಾತ್ರಿ ಮನೆಯ ಪಕ್ಕದಲ್ಲಿರುವ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

LEAVE A REPLY

Please enter your comment!
Please enter your name here