Home Uncategorized ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

30
0

ಬ್ರಹ್ಮಾವರ: ವೈಯಕ್ತಿಕ ಕಾರಣದಿಂದ ಮನನೊಂದ ನೀಲಾವರ ಗ್ರಾಮದ ಎಳ್ಳಂಪಳ್ಳಿ ದೀವಾನ್ ಗುಡ್ಡೆ ನಿವಾಸಿ ರಾಜು(57) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ಜ.18ರಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಮದುವೆಯಾಗದ ಚಿಂತೆಯಲ್ಲಿ ಬೇಸರಗೊಂಡು ಜ.13ರಂದು ವಿಷ ಸೇವಿಸಿ ಮಣಿಪಾಲದ ಪ್ರೊ ಡಿಜಿ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಅಸ್ವಸ್ಥಗೊಂಡಿದ್ದ ಅಲೆವೂರು ಗ್ರಾಮದ ರಮೇಶ್ ಕಾಮತ್(43) ಎಂಬವರು ಜ.18ರಂದು ಬೆಳಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here