Home ಕರ್ನಾಟಕ ಪ್ರಧಾನಿ ಹುದ್ದೆಗೆ ರಾಜ್ಯದಿಂದ ಅಭ್ಯರ್ಥಿ ಇಲ್ಲ ಎಂದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಪ್ರಧಾನಿ ಹುದ್ದೆಗೆ ರಾಜ್ಯದಿಂದ ಅಭ್ಯರ್ಥಿ ಇಲ್ಲ ಎಂದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

20
0

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟ ಜಯಗಳಿಸಲಿದ್ದು, ಆಗ ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿಗೆ ಬೆಂಗಳೂರು ಪ್ರೆಸ್‍ಕ್ಲಬ್ ಆಯೋಜಿಸಿದ್ದ ಪತ್ರಿಕಾ ಸಂವಾದದಲ್ಲಿ ಪತ್ರಕರ್ತರೊಬ್ಬರು ಪ್ರಧಾನಿ ಹುದ್ದೆಗೆ ನೀವು ಕರ್ನಾಟಕದಿಂದ ಅಭ್ಯರ್ಥಿ ಆಗುವಿರೇ ಎಂದು ಪ್ರಶ್ನಿಸಿದರು. ಕರ್ನಾಟಕದಿಂದ ನಾನು ಪ್ರಧಾನಿ ಅಭ್ಯರ್ಥಿ ಅಲ್ಲ. ಆಗುವುದೂ ಇಲ್ಲ ಎಂದು ಹೇಳಿದ್ದೆ. ಆದರೆ ಕೆಲ ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ ಎಂದರು.

ಪ್ರಧಾನಿ ಹುದ್ದೆಗೆ ಅರ್ಹರಾದವರು, ಸಮರ್ಥರು ನಮ್ಮ ರಾಜ್ಯದಲ್ಲಿ ಬಹಳ ನಾಯಕರಿದ್ದಾರೆ ಎಂದೂ ಅವರು ಉಲ್ಲೇಖಿಸಿದರು.

LEAVE A REPLY

Please enter your comment!
Please enter your name here