ಬೆಂಗಳೂರು:
ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದತೆಗೆದುಹಾಕಲಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ ಎಂದು ಎಂದಿದ್ದಾರೆ.
ಸರ್ಕಾರಿ ಕೆಲಸದಿಂದ ಬಿಡುಗಡೆಗೊಳಿಸಿರುವ ಕುರಿತಂತೆ ಆದೇಶದ ಬಗ್ಗೆ ನೂತನ ಕುಮಾರಿ ಅವರು ಗಮನಕ್ಕೆ ತಂದಿದ್ದಾರೆ. ಅವರನ್ನು ಮತ್ತೆ ಮುಂದುವರಿಸುವ ಬಗ್ಗೆ ತಕ್ಷಣವೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದಿದ್ದಾರೆ.
ಮಾಜಿ ಸಿಎಂ ಬೊಮ್ಮಾಯಿ ಅವರು ಆದೇಶದಲ್ಲಿ ಗುತ್ತಿಗೆ ಆಧಾರದಲ್ಲಿ ಹಿರಿಯ ಸಹಾಯಕ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಈ ಹುದ್ದೆ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಇಲ್ಲವೇ ಮುಂದಿನ ಆದೇಶ ವರೆಗೆ ಎಂದು ನಮೂದಿಸಲಾಗಿತ್ತು.
ಆ ಆದೇಶದಲ್ಲಿ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಎಂದಿದ್ದರೂ ನೂತನ ಕುಮಾರಿ ಅವರ ಅಪೇಕ್ಷೆ ಮೇರೆಗೆ ಅವರನ್ನು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿತ್ತು.