Home Uncategorized ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

12
0

ಮಂಗಳೂರು: ವಿದ್ಯಾರ್ಥಿಗಳಲ್ಲಿ ನಾವಿನ್ಯತೆ ಮತ್ತು ತಾಂತ್ರಿಕ ಕೌಶಲ್ಯವನ್ನು ಬೆಳೆಸುವ ಪ್ರಯತ್ನದಲ್ಲಿ ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಶಾಲೆ ತನ್ನ ಇತ್ತೀಚಿನ ಆವೃತ್ತಿಯಾದ ಅಟಲ್ ಟಿಂಕರಿಂಗ್ ಲ್ಯಾಬ್ ಅನ್ನು ಶಾಲಾ ಆವರಣದಲ್ಲಿ ಸುಸಜ್ಜಿತ ವ್ಯವಸ್ಥೆಯುಳ್ಳ ಲ್ಯಾಬನ್ನು ಅನಾವರಣಗೊಳಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಇವರು ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಎಂ.ಐ,ಐ.ಟಿ ಮತ್ತು ಕೋಡಿಂಗ್ ಕ್ಷೇತ್ರಗಳಲ್ಲಿ ಯುವ ಮನಸುಗಳನ್ನು ಪೋಷಿಸುವ ವಿಚಾರದಲ್ಲಿ ಶಾಲೆಗಳ ಮಹತ್ವದ ಬಗ್ಗೆ ಮಾತನಾಡಿ ಮಕ್ಕಳನ್ನು ಪ್ರೋತ್ಸಾಹಿಸಿದರು.

ಈಗಿನ ಡಿಜಿಟಲ್ ಯುಗದಲ್ಲಿ ರೋಬೋಟ್ಗಳನ್ನು ನಿರ್ಮಿಸುವ ಹಾಗೂ ಕಂಪ್ಯೂಟರ್ ಆಧರಿತ ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಹೊಸ ಅನುಭವದೊಂದಿಗೆ ತಮ್ಮ ವಿದ್ಯಾರ್ಥಿಗಳನ್ನು ಸ್ವತಂತ್ರಗೊಳಿಸುವ ಉದ್ದೇಶ ಇದಾಗಿದೆ. ಈ ನಿಟ್ಟಿನಲ್ಲಿ ನಮ್ಮ ಶಾಲೆಯು ತಮ್ಮ ವಿದ್ಯಾರ್ಥಿಗಳನ್ನು ತಂತ್ರಜ್ಞಾನದ ನಿರಂತರ ಉಪಯೋಗದೊಂದಿಗೆ ಕೌಶಲ್ಯಯುಕ್ತ ಅಭಿವೃದ್ಧಿಗೆ ಸಜ್ಜುಗೊಳಿಸುವಲ್ಲಿ ಶಾಲೆಯು ಪ್ರಯತ್ನಿಸುವ ಗುರಿಯಾಗಿದೆ.

ಈ ಸಮಾರಂಭದಲ್ಲಿ ಶಾಲಾ ಮುಖ್ಯಸ್ಥರಾದ ಶ್ರೀಯುತ ಹೈದರಾಲಿ ಹಾಗೂ ಶಾಲಾ ಆಡಳಿತ ಮಂಡಳಿಯ ಇತರ ಸದಸ್ಯರು ಪಾಲ್ಗೊಂಡಿದ್ದರು. ಅದೇ ರೀತಿ ಶಾಲಾ ಪ್ರಾಂಶುಪಾಲರಾದ ಫಿರೋಝ ಫೈಯಾಝ್, ಕಾಲೇಜ್ ಪ್ರಾಂಶುಪಾಲರಾದ ಸಿಂಧು ಸೇದು, ತರಗತಿಯ ಮುಖ್ಯಸ್ಥರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದ ದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here