Home Uncategorized ಪ್ರೇಮ ವೈಫಲ್ಯ: ಬಾಳೆಮಂಡಿ ವ್ಯಾಪಾರಿ ಆತ್ಮಹತ್ಯೆಗೆ ಶರಣು

ಪ್ರೇಮ ವೈಫಲ್ಯ: ಬಾಳೆಮಂಡಿ ವ್ಯಾಪಾರಿ ಆತ್ಮಹತ್ಯೆಗೆ ಶರಣು

20
0

ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಬೇಸರಗೊಂಡು ಬಾಳೇಕಾಯಿ ಮಂಡಿಯ ವ್ಯಾಪಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು: ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಬೇಸರಗೊಂಡು ಬಾಳೇಕಾಯಿ ಮಂಡಿಯ ವ್ಯಾಪಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನವೀನ್ ಜೆಎಸ್ (27) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಮನೆಯಲ್ಲಿ ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸೀರೆಯಿಂದ ನೇಣು ಬಿಗಿದುಕೊಂಡು ನವೀನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕು ಚಿಕ್ಕಕಲ್ಲೂರು ಗ್ರಾಮದ ನವೀನ್, ಮಹಾಲಕ್ಷ್ಮೀ ಲೇ ಔಟ್ ಸಮೀಪದ ಶಂಕರನಗರದಲ್ಲಿ ಬಾಳೇಕಾಯಿ ಮಂಡಿ ಇಟ್ಟಿದ್ದರು. ಜೆ.ಎಸ್.ನಗರದಲ್ಲಿ ಆತನ ಕುಟುಂಬ ನೆಲೆಸಿತ್ತು. ಹಲವು ವರ್ಷಗಳಿಂದ ಯುವತಿಯೊಬ್ಬಳನ್ನು ನವೀನ್ ಪ್ರೀತಿಸುತ್ತಿದ್ದ. ಆದರೆ, ಇತ್ತೀಚೆಗೆ ನವೀನ್ ನಿಂದ ಆಕೆಯ ಅಂತರ ಕಾಯ್ದುಕೊಂಡಿದ್ದಳು.

ಈ ಬೆಳವಣಿಗೆಯಿಂದ ಬೇಸರಗೊಂಡ ನವೀನ್, ಇದೇ ಬೇಸರದಿಂದ ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here