Home Uncategorized ಫೆ.10 ರಿಂದ ವಿಧಾನಮಂಡಲ ಬಜೆಟ್ ಅಧಿವೇಶನ, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಫೆ.10 ರಿಂದ ವಿಧಾನಮಂಡಲ ಬಜೆಟ್ ಅಧಿವೇಶನ, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

18
0
Advertisement
bengaluru

ಮುಂದಿನ ತಿಂಗಳ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.  ಬೆಂಗಳೂರು: ಮುಂದಿನ ತಿಂಗಳ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಆಧುನಿಕ ಬಸ್ ನಿಲ್ದಾಣಕ್ಕೆ 63 ಕೋಟಿ ರೂ. ಅಂಬೇಡ್ಕರ್ ವಸತಿ ನಿಲಯ ನಿರ್ಮಾಣಕ್ಕೆ 600 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ. ಶಿವಮೊಗ್ಗ ಜಿಲ್ಲೆಗಳಲ್ಲಿ ನಾರಾಯಣ ಗುರು ಹೆಸರಿನಲ್ಲಿ ಹಿಂದುಳಿದ ವರ್ಗಗಳ ಶಾಲೆ ನಿರ್ಮಾಣಕ್ಕೆ 72 ಕೋಟಿ ರೂ ನೀಡಲಾಗಿದೆ ಎಂದು ಅವರು ತಿಳಿಸಿದರು. 

ಕರ್ನಾಟಕ ಸಕ್ಕರೆ (ಉತ್ಪಾದನಾ ನಿಯಂತ್ರಣ) ಆದೇಶ 2022ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಜಲಜೀವನ್ ಮಿಷನ್ ಅಡಿಯಲ್ಲಿ ಶಿವಮೊಗ್ಗ ತಾಲೂಕಿನ ಆನವೇರಿ ಮತ್ತಿತರ 23 ಗ್ರಾಮಗಳಿಗೆ ರೂ. 26.62 ಕೋಟಿ ಅಂದಾಜು ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಜ್ಯ ಹಣಕಾಸು ಸಂಸ್ಥೆಗೆ ಹೆಚ್ಚುವರಿಯಾಗಿ ರೂ. 54.60 ಕೋಟಿ ಷೇರು ಬಂಡವಾಳ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ.ಇಂದಿನ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು.@BSBommai 1/2 pic.twitter.com/Z8rEMYBglW— CM of Karnataka (@CMofKarnataka) January 20, 2023

bengaluru bengaluru

bengaluru

LEAVE A REPLY

Please enter your comment!
Please enter your name here