ಉಡುಪಿ, ಫೆ.8: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷ ಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಫೆಬ್ರವರಿ 14 ರಂದು ಬೆಳಗ್ಗೆ 11ರಿಂದ ಅಪರಾಹ್ನ 1:00 ಗಂಟೆಯವರೆಗೆ ಕಾಪು ಪುರಸಭೆ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.
ಉಳಿದ ದಿನಗಳಲ್ಲೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷ ಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2ಮೊ.ನಂ: 9364062696.
ಅರ್ಜಿದಾರರು ನಮೂನೆ 1 ಮತ್ತು 2ರಲ್ಲಿ ಅರ್ಜಿ ಭರ್ತಿ ಮಾಡಿ, ಅಫಿಡಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾ ಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದು.
ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.