ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಐದು ಗ್ಯಾರಂಟಿಗಳ ಜಾರಿಗೆ ಘೋಷಣೆ ಮಾಡಿದ್ದು, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ ಎಂದು ಕಾಂಗ್ರೆಸ್ ಹೇಳುವ ಮೂಲಕ ಬಿಜೆಪಿಯ ಕಾಲೆಳೆದಿದೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಐದು ಗ್ಯಾರಂಟಿಗಳ ಜಾರಿಗೆ ಘೋಷಣೆ ಮಾಡಿದ್ದು, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ ಎಂದು ಕಾಂಗ್ರೆಸ್ ಹೇಳುವ ಮೂಲಕ ಬಿಜೆಪಿಯ ಕಾಲೆಳೆದಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ನುಡಿದಂತೆ ನಡೆಯುವವರು, ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ಹೇಳಿದೆ.
ಇದನ್ನೂ ಓದಿ: ಐದು ಗ್ಯಾರಂಟಿ ಘೋಷಣೆ: ಜೂನ್ 11 ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ, ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ
ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು.
ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ.
ಇದು ನಮ್ಮ ಬದ್ಧತೆ,
— Karnataka Congress (@INCKarnataka) June 2, 2023
ನಳಿನ್ ಕುಮಾರ್ ಕಟೀಲ್ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ, ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ, ಶೋಭಾ ಕರಂದ್ಲಾಜೆ ಅವರೇ ನಿಮಗೂ ಪ್ರಯಾಣ ಫ್ರೀ, ಸಿಟಿ ರವಿ ಅವರೇ ನಿಮ್ಮ ಮನೆಯವರೆಗೂ ರೂ. 2,000 ಫ್ರೀ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಲಾಗಿದೆ.
,@nalinkateel ಅವರೇ,
ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!@BSBommai ಅವರೇ, ನಿಮ್ಮ ಮನೆಗೂ ಫ್ರೀ!@ShobhaBJP ಅವರೇ, ನಿಮಗೂ ಪ್ರಯಾಣ ಫ್ರೀ!@CTRavi_BJP ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ!
ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)!
ಇದು ನಮ್ಮ ಗ್ಯಾರಂಟಿ.
— Karnataka Congress (@INCKarnataka) June 2, 2023
