Home Uncategorized ಬಜರಂಗದಳ ಬ್ಯಾನ್: ಯಾವುದೇ ಸಂಘ ಸಂಸ್ಥೆ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ- ಜಗದೀಶ್ ಶೆಟ್ಟರ್

ಬಜರಂಗದಳ ಬ್ಯಾನ್: ಯಾವುದೇ ಸಂಘ ಸಂಸ್ಥೆ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ- ಜಗದೀಶ್ ಶೆಟ್ಟರ್

64
0

ಯಾವುದೇ ಸಂಘ ಸಂಸ್ಥೆ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಪಕ್ಷದ ಬಜರಂಗದಳ ನಿಷೇಧ ಭರವಸೆ ಕುರಿತು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಹೇಳಿದ್ದಾರೆ. ಬೆಳಗಾವಿ: ಯಾವುದೇ ಸಂಘ ಸಂಸ್ಥೆ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಪಕ್ಷದ ಬಜರಂಗದಳ ನಿಷೇಧ ಭರವಸೆ ಕುರಿತು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಹೇಳಿದ್ದಾರೆ.

ಬೆಳಗಾವಿಯ ಮಹಾಂತ ಭವನದಲ್ಲಿ ಮಾತನಾಡಿದ ಅವರು, ಬಜರಂಗದಳ ಬ್ಯಾನ್ ಮಾಡುವುದಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಇಂದು ಸ್ಪಷ್ಟವಾಗಿ ಹೇಳಿದ್ದಾರೆ. ಯಾವುದೇ ಸಂಘ ಸಂಸ್ಥೆಯನ್ನು ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಅದು ಕೇಂದ್ರ ಸರ್ಕಾರಕ್ಕೆ ಇರುವ ಅಧಿಕಾರ. ಹೀಗಾಗಿ ನಾನು ಇದರ ಬಗ್ಗೆ ಹೆಚ್ಚು ಚರ್ಚೆ ಮಾಡಲು ಹೋಗಲ್ಲ. ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಯಾರೂ ಏನೇ ಹೇಳಿದರೂ ಏನೂ ಮಾಡಲು ಸಾಧ್ಯವಿಲ್ಲ. ಇವತ್ತು ಜನರ ಪ್ರೀತಿ ವಿಶ್ವಾಸ ನಮ್ಮ ಮೇಲೆ ಇದೆ. ನಾವು ಗೆದ್ದೆ ಗೆಲ್ಲುತ್ತೇವೆ ಎಂಬ ವಿಶ್ವಾಸ ನಮ್ಮಲ್ಲಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here