ಶಾಲಾ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ 30 ಮಕ್ಕಳು ಪಾರಾದ ಘಟನೆ ಬಳ್ಳಾರಿ ಜಿಲ್ಲೆಯ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ ಬಳಿ ಸೋಮವಾರ ನಡೆದಿದೆ ಸಿರಗುಪ್ಪ: ಶಾಲಾ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ 30 ಮಕ್ಕಳು ಪಾರಾದ ಘಟನೆ ಬಳ್ಳಾರಿ ಜಿಲ್ಲೆಯ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ ಬಳಿ ಸೋಮವಾರ ನಡೆದಿದೆ. ಬ್ಯಾಟರಿ ಘಟಕದಲ್ಲಿನ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎನ್ನಲಾಗಿದೆ. ಎಚ್ಚೆತ್ತ ಚಾಲಕ ಸಮಯಕ್ಕೆ ಸರಿಯಾಗಿ ಎಲ್ಲ ಮಕ್ಕಳನ್ನು ಬಸ್ ನಿಂದ ಕೆಳಗೆ ಇಳಿಸಿದ್ದಾರೆ.
ಬಸ್ ಚಾಲಕ ಮತ್ತು ಸಹಾಯಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರುಗುಪ್ಪದಲ್ಲಿರುವ ವಿಶ್ವ ಜ್ಯೋತಿ ಶಾಲೆಯ ಮಕ್ಕಳು ಶಾಲಾ ಬಸ್‌ನಲ್ಲಿ ತಮ್ಮ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮಕ್ಕಳು ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ ತಿಳಿಯಬೇಕಾಗಿದೆ. ಬ್ಯಾಟರಿ ಘಟಕದಿಂದ ಹೊಗೆ ಬರುತ್ತಿದ್ದನ್ನು ಮೊದಲ ಚಾಲಕ ನೋಡಿದ್ದಾರೆ. ಕೂಡಲೇ ಮಕ್ಕಳನ್ನು ಒಬ್ಬೊಬ್ಬರಾಗಿ ಬಸ್ ನಿಂದ ಇಳಿಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಮಗು ಗಾಯಗೊಂಡಿಲ್ಲ. ಗಾಬರಿಗೊಂಡ ಪೋಷಕರು ಅಪಘಾತದ ಸ್ಥಳಕ್ಕೆ ಬಂದು ತಮ್ಮ ಮಕ್ಕಳನ್ನು ನೋಡಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ಚಿಕಿತ್ಸಾ ವಿಭಾಗದ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಶಾಲಾ ಬಸ್ಸು ಹೊತ್ತಿ ಉರಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.