Home Uncategorized ಬಹು ನಿರೀಕ್ಷಿತ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ ಮಾರ್ಚ್ 11ರಂದು ಉದ್ಘಾಟನೆ: ಪ್ರಧಾನಿ ನರೇಂದ್ರ ಮೋದಿಯಿಂದ ಲೋಕಾರ್ಪಣೆ

ಬಹು ನಿರೀಕ್ಷಿತ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ ಮಾರ್ಚ್ 11ರಂದು ಉದ್ಘಾಟನೆ: ಪ್ರಧಾನಿ ನರೇಂದ್ರ ಮೋದಿಯಿಂದ ಲೋಕಾರ್ಪಣೆ

21
0

ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್‌ 11ರಂದು ಲೋಕಾರ್ಪಣೆಯಾಗಲಿದೆ. ಬೆಂಗಳೂರು: ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್‌ 11ರಂದು ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಧೃಡಪಡಿಸಿದ್ದಾರೆ.

ಇದರ ಜೊತೆಗೆ ಪ್ರಧಾನಿ ಮೋದಿ ಮೈಸೂರಿನಿಂದ ಕುಶಾಲನಗರದವರೆಗಿನ ಉದ್ದೇಶಿತ ಚತುಷ್ಪಥ ಎಕ್ಸ್‌ಪ್ರೆಸ್ ರಸ್ತೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಶುಕ್ರವಾರ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಈ ಯೋಜನೆ ಪೂರ್ಣಗೊಂಡಿರುವುದರಿಂದ, ಅವರೇ ಇದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವುದು ಸೂಕ್ತ” ಎಂದು ಸಿಂಹ ಹೇಳಿದರು. ನೀವು ರಾಜ್ಯ ರಾಜಕೀಯಕ್ಕೆ ಪ್ರವೇಶಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪ್ ಸಿಂಹ,  2029 ರವರೆಗೆ ಮೋದಿ ನಾಯಕತ್ವದಲ್ಲಿ ಸಂಸದರಾಗಿ ಮುಂದುವರಿಯಲು ಬಯಸುತ್ತೇನೆ ಎಂದು ಹೇಳಿದರು.

ನಾನು ಇಲ್ಲಿಗೆ ಬಂದಿರುವುದು ದೀರ್ಘಾವಧಿಯ ರಾಜಕೀಯ ಮಾಡಲು ಅಲ್ಲ ಆದರೆ ನನ್ನ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮತ್ತು 15 ವರ್ಷಗಳ ಅವಧಿಯಲ್ಲಿ ಇತರ ಕ್ಷೇತ್ರಗಳಿಗೆ ಮಾದರಿಯಾಗಲು ಎಂದಿದ್ದಾರೆ.

LEAVE A REPLY

Please enter your comment!
Please enter your name here