Home Uncategorized ಬಾಗಲಕೋಟೆ: ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ, ಗಾಯಾಳು ವಿದ್ಯಾರ್ಥಿಗಳಿಗೆ ಪರಿಹಾರ ಘೋಷಿಸಿದ ಸಿಎಂ...

ಬಾಗಲಕೋಟೆ: ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ, ಗಾಯಾಳು ವಿದ್ಯಾರ್ಥಿಗಳಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

34
0

ಬಾಗಲಕೋಟೆ: ಜಮಖಂಡಿ ತಾಲೂಕಿನ ಆಲಗೂರು ಸಮೀಪ ರವಿವಾರ ರಾತ್ರಿ ನಡೆದ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಹಾಗೂ ಗಾಯಾಳು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ಘೋಷಿಸಿದ್ದಾರೆ. 

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ ಅವರು, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ. ಮೃತ ವಿದ್ಯಾರ್ಥಿಗಳ‌ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ. ಮೃತ ವಿದ್ಯಾರ್ಥಿಗಳ‌ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಅಪಘಾತದಲ್ಲಿ… pic.twitter.com/lx0NglHtnn

— Siddaramaiah (@siddaramaiah) January 29, 2024

LEAVE A REPLY

Please enter your comment!
Please enter your name here