Home Uncategorized ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿ- ಸಿಎಂ ಸಿದ್ದರಾಮಯ್ಯ

ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿ- ಸಿಎಂ ಸಿದ್ದರಾಮಯ್ಯ

31
0

ಬಾಬು ಜಗಜೀವನ್ ರಾಂ ಅವರ  ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು: ಬಾಬು ಜಗಜೀವನ್ ರಾಂ ಅವರ  ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಸಿರು ಕ್ರಾಂತಿಯ ಹರಿಹಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್‍ ರಾಮ್ ರವರ 37 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರ ಬಳಿ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಭಾರತದಲ್ಲಿ ನೆಹರು ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದ, ದೇಶದ ಮೊದಲ ಉಪ ಪ್ರಧಾನಿಯಾಗಿದ್ದ ಬಾಬು ಜಗಜೀವನ್ ರಾಮ್ ಅವರು, ದಕ್ಷ ಆಡಳಿತಗಾರರು. ಹಸಿರು ಕ್ರಾಂತಿಯ ಮೂಲಕ ದೇಶದಲ್ಲಿ ಆಹಾರ ಸ್ವಾಲಂಬಲನೆಯಾಗಲು ಕಾರಣಕರ್ತರು ಎಂದರು. ಮುಖ್ಯಮಂತ್ರಿ @siddaramaiah ಅವರು ಇಂದು ಬಾಬು ಜಗಜೀವನ್ ರಾಮ್ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಬಾಬೂಜಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವ @CMahadevappa ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/Bw4hutioPi— CM of Karnataka (@CMofKarnataka) July 6, 2023

ಯಾವುದೇ ಇಲಾಖೆಯಲ್ಲಿದ್ದರೂ ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು.  ಅವರ ಬದುಕು ನಮಗೆ ಪ್ರೇರಣೆಯಾಗಬೇಕು ಎಂದರು.  ಅಂಥ ಮಹಾನುಭಾವರ ಪುಣ್ಯಸ್ಮರಣೆ ಮಾಡಿದ್ದು, ಅವರು ನಮಗೆಲ್ಲರಿಗೂ ಮಾರ್ಗದರ್ಶಕರು.  ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.

LEAVE A REPLY

Please enter your comment!
Please enter your name here