Home Uncategorized ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ

35
0

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ನಾಲ್ಕು ವರ್ಷಗಳ ಹಿಂದಿನ ಪ್ರಕರಣದಲ್ಲಿ ಅಪರಾಧಿ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲೆಯ ಹೆಚ್ಚುವರಿ ಹಾಗೂ ಸೆಷನ್ಸ್ ನ್ಯಾಯಾಲಯ (ಪೋಕ್ಸೋ ಕೋರ್ಟ್) ಆದೇಶ ಪ್ರಕಟಿಸಿದೆ. ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ನಾಲ್ಕು ವರ್ಷಗಳ ಹಿಂದಿನ ಪ್ರಕರಣದಲ್ಲಿ ಅಪರಾಧಿ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲೆಯ ಹೆಚ್ಚುವರಿ ಹಾಗೂ ಸೆಷನ್ಸ್ ನ್ಯಾಯಾಲಯ (ಪೋಕ್ಸೋ ಕೋರ್ಟ್) ಆದೇಶ ಪ್ರಕಟಿಸಿದೆ.
 
32 ವರ್ಷದ ವ್ಯಕ್ತಿಗೆ ಶಿಕ್ಷೆ ನೀಡಲಾಗಿದ್ದು ಕೋಟಾ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿತ್ತು. ಬ್ರಹ್ಮಾವರ ತಾಲೂಕಿನ ಬಳೆಕುದ್ರು ನಿವಾಸಿ ಅಶೋಕ್ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ನ್ಯಾಯಾಧೀಶ ಶ್ರೀನಿವಾಸ ಸುವರ್ಣ ತೀರ್ಪು ನೀಡಿದ್ದು, 20 ವರ್ಷಗಳ ಜೈಲು ಶಿಕ್ಷೆ ಜೊತೆ 23,000 ರೂಪಾಯಿಗಳ ದಂಡ ವಿಧಿಸಿದ್ದಾರೆ.
 
15 ವರ್ಷ ವಯಸ್ಸಿನ ಬಾಲಕಿಯೊಂದಿಗೆ ಅಶೋಕ್ ಸ್ನೇಹ ಬೆಳೆಸಿದ್ದ. ಆಕೆಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದ ಆತ ಆಕೆಯನ್ನು ಒತ್ತಾಯಪೂರ್ವಕವಾಗಿ ಮತ್ತೋರ್ವ ಆರೋಪಿ ಮನೆಗೆ ಕರೆದೊಯ್ದಿದ್ದ. 

ಮಡಿಕೇರಿ: ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿ ಮನೆಗೆ ವಾಪಸ್ ಕರೆತಂದು ಬಿಟ್ಟಿದ್ದ.  ಈ ಕೃತ್ಯವನ್ನು ಯಾರಿಗೂ ತಿಳಿಸಬಾರದು ಎಂದು ಆರೋಪಿ ವ್ಯಕ್ತಿ ಬೆದರಿಕೆಯನ್ನೂ ಹಾಕಿದ್ದ. ಬಾಲಕಿ ಕುಟುಂಬ ಸದಸ್ಯರಿಗೆ ತನಗಾದ ಹಿಂಸೆಯ ಬಗ್ಗೆ ತಿಳಿಸಿ ಪೋಷಕರ ಸಹಾಯದಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು ಎಂದು ಚಾರ್ಜ್ ಶೀಟ್ ಮೂಲಕ ತಿಳಿದುಬಂದಿದೆ. 
 
ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.  13, 000 ರೂಪಾಯಿ ದಂಡದ ಮೊತ್ತವನ್ನು ಸಂತ್ರಸ್ತೆಗೆ ತಲುಪಿಸಲು ಸೂಚಿಸಿರುವ ಕೋರ್ಟ್, 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಿದೆ. ಸಾಕ್ಷ್ಯಾಧಾರ ಕೊರತೆಯಿಂದಾಗಿ ಮತ್ತೋರ್ವ ಆರೋಪಿಯನ್ನು ಕೋರ್ಟ್ ವಜಾಗೊಳಿಸಿದೆ. 

LEAVE A REPLY

Please enter your comment!
Please enter your name here