Home Uncategorized ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದ ನಗರ ಪೊಲೀಸ್ ಕಮಿಷನರ್, ಮಹಿಳೆಯರ ಸುರಕ್ಷತೆಯ ಬಗ್ಗೆ ಜಾಗೃತಿ!

ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದ ನಗರ ಪೊಲೀಸ್ ಕಮಿಷನರ್, ಮಹಿಳೆಯರ ಸುರಕ್ಷತೆಯ ಬಗ್ಗೆ ಜಾಗೃತಿ!

29
0

ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮತ್ತು ಇತರ ಉನ್ನತ ಪೊಲೀಸ್ ಅಧಿಕಾರಿಗಳು ಸೋಮವಾರ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದರು.  ಬೆಂಗಳೂರು: ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮತ್ತು ಇತರ ಉನ್ನತ ಪೊಲೀಸ್ ಅಧಿಕಾರಿಗಳು ಸೋಮವಾರ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದರು. 

ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನಗರ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ಮಹಿಳೆಯರ ಸುರಕ್ಷತೆಗೆ ಕ್ರಮಗಳನ್ನು ಕೈಗೊಳ್ಳಲು ಒತ್ತು ನೀಡಿದ ಒಂದು ವಾರದ ನಂತರ ಪೊಲೀಸ್ ಅಧಿಕಾರಿಗಳು ಬಸ್ಸುಗಳಲ್ಲಿ ಪ್ರಯಾಣಿಸಿ ಜಾಗೃತಿ ಮೂಡಿಸಿದರು.

Women safety is of utmost concern to Bengaluru City Police. Today all BCP officers travelled in BMTC buses and discussed with women travellers to understand their concerns. Also created awareness with them reg various measures taken by BCP reg women safety in the city. pic.twitter.com/tlud7RKEN3
— B Dayananda IPS CP Bengalur ಪೊಲೀಸ್ ಆಯುಕ್ತ ಬೆಂಗಳೂರು (@CPBlr) June 19, 2023

ಕಳೆದ ವಾರ, ನಗರದ ಪೊಲೀಸ್ ಉನ್ನತ ಅಧಿಕಾರಿಗಳು ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಹೊಯ್ಸಳ ವಾಹನಗಳಲ್ಲಿ ಕೆಲವು ಗಂಟೆಗಳ ಕಾಲ ಗಸ್ತು ತಿರುಗಿದರು. ದಯಾನಂದ ಮತ್ತು ಅವರ ತಂಡ ಮಹಿಳಾ ಪ್ರಯಾಣಿಕರೊಂದಿಗೆ ಅವರ ಸಮಸ್ಯೆಗಳನ್ನು ಆಲಿಸಿದರು. 

ಮಹಿಳೆಯರ ಸುರಕ್ಷತೆಗಾಗಿ ನಗರ ಪೊಲೀಸರು ಕೈಗೊಂಡಿರುವ ವಿವಿಧ ಕ್ರಮಗಳ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಿದ ಅವರು, ತುರ್ತು ಸಂದರ್ಭಗಳಲ್ಲಿ 112 ಗೆ ಕರೆ ಮಾಡಲು ಸೂಚಿಸಿದರು.

LEAVE A REPLY

Please enter your comment!
Please enter your name here