Home ಕರ್ನಾಟಕ ಬಿಜೆಪಿಗೆ ರಾಜೀನಾಮೆ ನೀಡಿದ ಸಂಸದ ಬಿ.ಎನ್ ಬಚ್ಚೇಗೌಡ

ಬಿಜೆಪಿಗೆ ರಾಜೀನಾಮೆ ನೀಡಿದ ಸಂಸದ ಬಿ.ಎನ್ ಬಚ್ಚೇಗೌಡ

34
0

ಚಿಕ್ಕಬಳ್ಳಾಪುರ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಬುಧವಾರ ರಾಜೀನಾಮೆ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.

‘ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಕೋರುತ್ತೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

2008ರಿಂದ ಬಿಜೆಪಿಯಲ್ಲಿ ಶಾಸಕ, ಸಚಿವ, ಸಂಸದನಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here