Home ರಾಜಕೀಯ ಬಿಜೆಪಿಯಿಂದ ಶ್ರೀನಿವಾಸ್ ಉಚ್ಚಾಟನೆ; ಕಟೀಲ್

ಬಿಜೆಪಿಯಿಂದ ಶ್ರೀನಿವಾಸ್ ಉಚ್ಚಾಟನೆ; ಕಟೀಲ್

24
0

ಬೆಂಗಳೂರು:

ವಿಧಾನ ಪರಿಷತ್ ನ ಆಗ್ನೇಯ ಪದವೀಧರರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಭಾರತೀಯ ಜನತಾ ಪಾರ್ಟಿಯ ಚುನಾವಣೆಗೆ ಮುಜುಗರ ತಂದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಚ್ಚಾಟಿಸಿದ್ದಾರೆ.

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶ್ರೀನಿವಾಸ್ ಅವರು ಕಣದಿಂದ ಹಿಂದಕ್ಕೆ ಸರಿಯುವಂತೆ ತಿಳಿಸಿದ ಪಕ್ಷದ ಸೂಚನೆಯನ್ನು ಕಡೆಗಣಿಸಿ ಮುಜುಗರಕ್ಕೆ ಕಾರಣರಾಗಿದ್ದಾರೆ. ಆದ್ದರಿಂದ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಕಟೀಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here