ಬೆಂಗಳೂರು, ನ15: ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿದರು.
ನಳಿನ್ ಕುಮಾರ್ ಕಟೀಲ್ ಅವರು ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಮುನಿರತ್ನ, ಪ್ರಭು ಚೌಹಾಣ್, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸಹಿತ ಹಲವು ನಾಯಕರು ಹಾಜರಿದ್ದರು.