ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಭೆ ವೇಳೆ ಹೃದಯಾಘಾತವಾಗಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿದ್ದೇಶ್ ಯಾದವ್ ಮೃತಪಟ್ಟಿದ್ದಾರೆ. ಬೆಂಗಳೂರು: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಭೆ ವೇಳೆ ಹೃದಯಾಘಾತವಾಗಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿದ್ದೇಶ್ ಯಾದವ್ ಮೃತಪಟ್ಟಿದ್ದಾರೆ.
ಒಬಿಸಿ ಮೋರ್ಛಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ 46 ವರ್ಷದ ಸಿದ್ದೇಶ್ ಯಾದವ್ ಜಿಲ್ಲಾ ಪ್ರಭಾರಿಗಳ ಸಭೆಗೆ ಪಾಲ್ಗೊಳ್ಳಲು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ್ದರು. ಮಧ್ಯಾಹ್ನ ಸಭೆ ಮುಗಿಸಿ ಹೊರಗೆ ಬಂದಾಗ ಸಿದ್ದೇಶ್ ಯಾದವ್ ಕುಸಿದು ಬಿದ್ದಿದ್ದಾರೆ.
ಕೂಡಲೇ ಸಿದ್ದೇಶ್ ಯಾದವ್ ಅವರನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.