ಮಂಡ್ಯ : ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ಮಂಡ್ಯ ಕ್ಷೇತ್ರದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಘೋಷಿಸಿದ್ದಾರೆ.
ಇಂದು ನಗರದ ಕಾಳಿಕಾಂಬಾ ದೇವಸ್ಥಾನದ ಆವರಣದಲ್ಲಿ ಬೆಂಬಲಿಗರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಿರೀಕ್ಷೆಯಂತೆಯೇ ಸುಮಲತಾ ಅಂಬರೀಶ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.
ಸಭೆಯಲ್ಲಿ ಪುತ್ರ ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ದರ್ಶನ್ ಸೇರಿದಂತೆ ನಟ ಅಂಬರೀಶ್ ಅಭಿಮಾನಿಗಳು ಮತ್ತು ಬೆಂಗಲಿಗರು ಉಪಸ್ಥಿತರಿದ್ದರು.