Home Uncategorized ಬಿಪರ್‌ಜಾಯ್ ಎಫೆಕ್ಟ್; ರಾಜ್ಯದಲ್ಲಿ ಶೇ 71ರಷ್ಟು ಮಳೆ ಕೊರತೆ, ಜೂನ್ 21ರಿಂದ ಎರಡು ವಾರ ಭಾರಿ...

ಬಿಪರ್‌ಜಾಯ್ ಎಫೆಕ್ಟ್; ರಾಜ್ಯದಲ್ಲಿ ಶೇ 71ರಷ್ಟು ಮಳೆ ಕೊರತೆ, ಜೂನ್ 21ರಿಂದ ಎರಡು ವಾರ ಭಾರಿ ಮಳೆ ಸಾಧ್ಯತೆ!

16
0

ಕಳೆದ ವಾರ ಗುಜರಾತ್ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ ‘ಬಿಪರ್‌ಜಾಯ್’ ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಪ್ರಗತಿಯ ಮೇಲೆ ಪರಿಣಾಮ ಬೀರಿದೆ. ಐಎಂಡಿ ಪ್ರಕಾರ, ಜೂನ್ 1 ರಿಂದ ಕರ್ನಾಟಕದಲ್ಲಿ ಇದುವರೆಗೆ 34.3 ಮಿಮೀ ಮಳೆಯಾಗಿದ್ದು, ಸಾಮಾನ್ಯ ಮಳೆಯ 119.6 ಮಿಮೀ ವಿರುದ್ಧ ಶೇ 71 ರಷ್ಟು ಕೊರತೆಯಾಗಿದೆ. ಬೆಂಗಳೂರು: ಕಳೆದ ವಾರ ಗುಜರಾತ್ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ ‘ಬಿಪರ್‌ಜಾಯ್’ ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಪ್ರಗತಿಯ ಮೇಲೆ ಪರಿಣಾಮ ಬೀರಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಜೂನ್ 1 ರಿಂದ ಕರ್ನಾಟಕದಲ್ಲಿ ಇದುವರೆಗೆ 34.3 ಮಿಮೀ ಮಳೆಯಾಗಿದ್ದು, ಸಾಮಾನ್ಯ ಮಳೆಯ 119.6 ಮಿಮೀ ವಿರುದ್ಧ ಶೇ 71 ರಷ್ಟು ಕೊರತೆಯಾಗಿದೆ.

ಹವಾಮಾನ ತಜ್ಞರ ಪ್ರಕಾರ, ಬಿಪರ್‌ಜಾಯ್ ದಕ್ಷಿಣ ಭಾರತದಿಂದ ತೇವಾಂಶವನ್ನು ಹೀರಿಕೊಂಡು ಈ ಕೊರತೆಯನ್ನು ಉಂಟುಮಾಡಿದೆ. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯ 49 ಸೆಂ.ಮೀ (ಶೇ 72 ನಷ್ಟು ಕೊರತೆ) ಗಳಿಗೆ ಹೋಲಿಸಿದರೆ 13 ಸೆಮೀ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಕೇವಲ 2 ಸೆಂ.ಮೀ (ಸಾಮಾನ್ಯ 7 ಸೆಂ.ಮೀ), ಶೇ 68 ರಷ್ಟು ಮಳೆ ಕೊರತೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಸಹ ಕೇವಲ 3 ಸೆಂ.ಮೀ ಮಳೆಯೊಂದಿಗೆ (ಸಾಮಾನ್ಯ 9 ಸೆಂ.ಮೀ) ಶೇ 73 ರಷ್ಟು ಕೊರತೆಯನ್ನು ಎದುರಿಸುತ್ತಿದೆ. ಬೆಂಗಳೂರಿನಲ್ಲಿ 3 ಸೆಂ.ಮೀ (ಸಾಮಾನ್ಯ 6 ಸೆಂ.ಮೀ) ಮಳೆಯಾಗುವುದರೊಂದಿಗೆ, ಶೇ 50 ರಷ್ಟು ಕೊರತೆಯೊಂದಿಗೆ ನಗರದಲ್ಲಿ ಸಹ ಪರಿಸ್ಥಿತಿಗಳು ಭಿನ್ನವಾಗಿಲ್ಲ.

ಐಎಂಡಿಯ ಬೆಂಗಳೂರು ನಿರ್ದೇಶಕ ಎ ಪ್ರಸಾದ್ ಮಾತನಾಡಿ, ‘ಬಿಪರ್‌ಜಾಯ್ ಚಂಡಮಾರುತವು ಮಾನ್ಸೂನ್ ಗಾಳಿಯ ಪ್ರಸರಣ ಮಾದರಿಯ ಮೇಲೆ ಪರಿಣಾಮ ಬೀರಿದೆ. ಇದು ಗುಜರಾತ್ ಅನ್ನು ದಾಟಿರುವುದರಿಂದ, ಮುಂಗಾರು ಪುನಶ್ಚೇತನಗೊಳ್ಳುವ ನಿರೀಕ್ಷೆಯಿದೆ. ಕರಾವಳಿ ಕರ್ನಾಟಕದಲ್ಲಿ ಭಾನುವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಪಶ್ಚಿಮ ದಿಕ್ಕಿನ ಮಾರುತಗಳು ಮುನ್ನಡೆಯುತ್ತಿದ್ದು, ಮುಂದಿನ ಮೂರು ದಿನಗಳಲ್ಲಿ ಮಾನ್ಸೂನ್ ಮತ್ತಷ್ಟು ಚುರುಕು ಪಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಲಿದೆ’ ಎಂದು ಹೇಳಿದರು.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಬೆಂಗಳೂರಿನಾದ್ಯಂತ ಧಾರಾಕಾರ ಮಳೆ, ಸಂಚಾರ ದಟ್ಟಣೆ: ಹಲವು ಜಿಲ್ಲೆಗಳಲ್ಲಿ ವರುಣ ಧಾರೆ

‘ಒಂದು ತಿಂಗಳ ಕಾಲ ವಿಸ್ತೃತ ಹವಾಮಾನ ಮುನ್ಸೂಚನೆಯ ಪ್ರಕಾರ, ಕರ್ನಾಟಕದಲ್ಲಿ ಜೂನ್ 21 ರಿಂದ ಎರಡು ವಾರಗಳವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯನ್ನು ಇಲಾಖೆ ನಿರೀಕ್ಷಿಸುತ್ತಿದೆ. ಮಾನ್ಸೂನ್‌ನ ಮತ್ತಷ್ಟು ಪ್ರಗತಿಗೆ ಪರಿಸ್ಥಿತಿಗಳು ಅನುಕೂಲಕರವಾಗಿವೆ ಮತ್ತು ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗಲಿದೆ’ ಎಂದು ಪ್ರಸಾದ್ ಹೇಳಿದರು.

LEAVE A REPLY

Please enter your comment!
Please enter your name here