Home Uncategorized ಬಿಬಿಎಂಪಿ ಅಗ್ನಿ ಅವಘಡ: ಗಾಯಾಳು ಜ್ಯೋತಿ ಹುದ್ದೆ ಖಾಯಂಗೊಳಿಸಲು ಪಾಲಿಕೆ ಚಿಂತನೆ!

ಬಿಬಿಎಂಪಿ ಅಗ್ನಿ ಅವಘಡ: ಗಾಯಾಳು ಜ್ಯೋತಿ ಹುದ್ದೆ ಖಾಯಂಗೊಳಿಸಲು ಪಾಲಿಕೆ ಚಿಂತನೆ!

29
0

ಬಿಬಿಎಂಪಿ ಅಗ್ನಿ ಅವಘಡ ಘಟನನೆಯಲ್ಲಿ ಗಂಭೀರವಾಗಿ ಗಾಯಗೊಂಡು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲ್ಯಾಬ್ ಆಪರೇಟರ್ ಜ್ಯೋತಿ ಅವರ ಹುದ್ದೆಯನ್ನು ಖಾಯಂಗೊಳಿಸಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಬಿಬಿಎಂಪಿ ಅಗ್ನಿ ಅವಘಡ ಘಟನನೆಯಲ್ಲಿ ಗಂಭೀರವಾಗಿ ಗಾಯಗೊಂಡು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲ್ಯಾಬ್ ಆಪರೇಟರ್ ಜ್ಯೋತಿ ಅವರ ಹುದ್ದೆಯನ್ನು ಖಾಯಂಗೊಳಿಸಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಗಾಯಾಳು ಜ್ಯೋತಿ ಅವರನ್ನು ಕಡಿಮೆ ವೇತನ ನೀಡಿ, ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. ಅಗ್ನಿ ಅವಘಡದಲ್ಲಿ ಜ್ಯೋತಿಯವರ ಮುಖ ಹಾಗೂ ಕೈಗಳಿಗೆ ಸುಟ್ಟ ಗಾಯಗಳಾಗಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮದುವೆ ಕೂಡ ರದ್ದುಗೊಂಡಿದೆ. ಈ ವಿಚಾರ ತಿಳಿದ ಪಾಲಿಕೆ ಅಧಿಕಾರಿಗಳು ಇದೀಗ ಅವರ ಕೆಲಸವನ್ನು ಖಾಯಂಗೊಳಿಸಲು ಮುಂದಾಗಿದ್ದಾರೆಂದು ವರದಿಗಳು ತಿಳಿಸಿವೆ.

ಈ ಕುರಿತು ಈಗಾಗಲೇ ಪಾಲಿಕೆಯ ಹಿರಿಯ ಅಧಿಕಾರಿಗಳು ಸಭೆ ನಡೆಸಿ ತೀರ್ಮಾನ ಕೈಗೊಂಡಿದ್ದಾರೆನ್ನಲಾಗಿದ್ದು, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ. ಶೀಘ್ರದಲ್ಲೇ ಇದಕ್ಕೆ ಒಪ್ಪಿಗೆ ಸಿಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿ, ಒಂದು ವಾರ ಕಳೆದಿದ್ದು, ಘಟನೆಯಲ್ಲಿ ಕ್ವಾಲಿಟಿ ಕಂಟ್ರೋಲ್ ವಿಭಾಗದ ಮುಖ್ಯ ಇಂಜಿನಿಯರ್ ಶಿವಕುಮಾರ್ ಹಾಗೂ ಜ್ಯೋತಿಯವರಿಗೆ ಗಂಭೀರ ಗಾಯಗಳಾಗಿವೆ. ಇನ್ನುಳಿದ 7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರ ನಿರ್ದೇಶನದಂತೆ ಎಲ್ಲಾ ಸಿಬ್ಬಂದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಮಾತನಾಡಿ, ಈ ಬಗ್ಗೆ ನನಗೂ ಮಾಹಿತಿ ಇದೆ. ಇಂತಹ ನಿರ್ಧಾರವನ್ನು ನಮ್ಮ ಸಂಗ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ.

ಸಂಘದಿಂದ 10 ಲಕ್ಷ ಪರಿಹಾರ ನೀಡುವಂತೆ ಬೇಡಿಕೆ ಇಟ್ಟಿದ್ದು, ಪಾಲಿಕೆ ಜ್ಯೋತಿ ಅವರನ್ನು ಕಾಯಂ ನೇಮಕ ಮಾಡಿದರೆ ಸ್ವಾಗತಿಸುತ್ತೇವೆ, ಮದುವೆ ರದ್ದಾಗಿರುವ ಬಗ್ಗೆಯೂ ಮಾಹಿತಿ ಇದ್ದು, ಕಾಯಂ ಸಿಬ್ಬಂದಿಯನ್ನಾಗಿಸಿದರೆ ಜ್ಯೋತಿ ಮತ್ತು ಅವರ ಕುಟುಂಬಕ್ಕೆ ಸ್ವಲ್ಪ ಸಮಾಧಾನ ಸಿಗುತ್ತದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here