ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಂತೆ ಕಂತೆ ನೋಟುಗಳನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳು ದಂಗಾದರು. ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಂತೆ ಕಂತೆ ನೋಟುಗಳನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳು ದಂಗಾದರು.
ಗಂಗಾಧರಯ್ಯರಿಗೆ ಸೇರಿದ ಯಲಹಂಕದಲ್ಲಿನ ಕಚೇರಿ, ಮಹಾಲಕ್ಷ್ಮಿ ಲೇಔಟ್ನಲ್ಲಿನ ಸಂಬಂಧಿಗಳ ನಿವಾಸ ಹಾಗೂ ಕುರುಬರಹಳ್ಳಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 1.5 ಕೋಟಿ ಹಣ, ವಿದೇಶಿ ಕರೆನ್ಸಿ, 2 ಕೋಟಿ ರೂ.ಗಳಿಗೂ ಹೆಚ್ಚಿನ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
Karnataka | Lokayukta raids BBMP official ADTP Gangadharaiah in Bengaluru’s Yelahanka in connection with a disproportionate assets case. Cash and jewellery recovered during the raid. pic.twitter.com/y2qtXrdFVw
— ANI (@ANI) April 24, 2023
ಎಸ್’ಪಿ. ಅಶೋಕ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಅಂದಾಜು ಮೊತ್ತ 1.5 ಕೋಟಿ ರೂಪಾಯಿ ನಗದು, 2 ಕೋಟಿ ರೂ.ಗಳಿಗೂ ಹೆಚ್ಚಿನ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಪತ್ತೆಯಾಗಿವೆ ಎಂದು ವರದಿಗಳು ತಿಳಿಸಿವೆ.
ಅಲ್ಲದೇ, ವಿದೇಶಿ ಕರೆನ್ಸಿ ಕೂಡ ಮನೆಯಲ್ಲಿ ಸಿಕ್ಕಿವೆ. ಅಧಿಕಾರಿಗಳು ಇನ್ನೂ ಅವರ ನಿವಾಸ, ಕಚೇರಿಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.
ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಚುನಾವಣೆಯ ಕಾರ್ಯಕ್ಕೆ ನೇಮಕವಾಗಿದ್ದು, ಇವರ ಕಾರಿನ ಮೇಲೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಸ್ಟಿಕ್ಕರ್ ಇರುವುದಾಗಿ ತಿಳಿದು ಬಂದಿದೆ.