Home Uncategorized ಬೀದರ್: ಕಾರು ಹರಿದು ಒಂದೂವರೆ ವರ್ಷದ ಮಗು ಮೃತ್ಯು

ಬೀದರ್: ಕಾರು ಹರಿದು ಒಂದೂವರೆ ವರ್ಷದ ಮಗು ಮೃತ್ಯು

21
0

ಬೀದರ್, ಡಿ.27: ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ಮಾತನಾಡುತ್ತಾ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ ಪರಿಣಾಮ ಒಂದೂವರೆ ವರ್ಷದ ಮಗುವೊಂದು ಕಾರಿನ ಚಕ್ರದಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ನಗರದ ಹಾರೂರಗೇರಿ ಸಮೀಪದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆ ಎದುರು ಮಂಗಳವಾರ ಸಂಜೆ ನಡೆದಿದೆ. ಇದರ ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.

ಸತೀಶ ಪಾಟೀಲ್ ಹಾಗೂ ಸಂಗೀತಾ ದಂಪತಿಯ ಪುತ್ರ ಬಸವಚೇತನ ಮೃತ ಮಗು.

ಮಂಗಳವಾರ ಸಂಜೆ ಮಗು ಆಸ್ಪತ್ರೆಯ ಎದುರು ಆಟವಾಡುತ್ತಿತ್ತು. ಈ ವೇಳೆ ವ್ಯಕ್ತಿಯೋರ್ವ ಮೊಬೈಲ್ ಫೋನ್ ನಲ್ಲಿ ಮಾತನಾಡುತ್ತ ಕಾರು ಚಲಾಯಿಸುತ್ತಾ ಬಂದಿದ್ದು, ಮಗುವನ್ನು ಗಮನಿಸದೆ ಢಿಕ್ಕಿ ಹೊಡೆದಿದ್ದಾನೆ. ಮಗು ಕಾರಿನ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದೆ.

ಈ ಬಗ್ಗೆ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here