ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬೀದರ್: ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸಂಧ್ಯಾರಾಣಿ ಸಂಜುಕುಮಾರ ಕಾಂಬಳೆ ಮೃತ ಬಾಲಕಿ. ಎರಡನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಗುರುವಾರ ಈದ್ ಮಿಲಾದ್ ರಜೆ ಕಾರಣ ಮನೆಯಲ್ಲಿದ್ದಳು. ಬಾಲಕಿ ಆಟ ಆಡುವಾಗ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಆಕೆಯ ತಲೆಗೆ ತೀವ್ರವಾಗಿ ಗಾಯವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳು ಸಂಧ್ಯಾರಾಣಿಯನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳಕ್ಕೆ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.