Home Uncategorized ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

12
0
Advertisement
bengaluru

ಎರಡು ದಿನಗಳ ಭೇಟಿಗಾಗಿ ಕೇಂದ್ರ ಗೃಹ ವ್ಯವಹಾರಗಳು ಮತ್ತು ಸಹಕಾರ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು. ಬೆಂಗಳೂರು: ಎರಡು ದಿನಗಳ ಭೇಟಿಗಾಗಿ ಕೇಂದ್ರ ಗೃಹ ವ್ಯವಹಾರಗಳು ಮತ್ತು ಸಹಕಾರ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು.

ವಾಯುಪಡೆಯ ವಿಶೇಷ ವಿಮಾನದಲ್ಲಿ ಯಲಹಂಕ ವಾಯುನೆಲೆಯಲ್ಲಿ ಬಂದಿಳಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತಿತರರು ಪುಷ್ಪ ಗುಚ್ಚ ನೀಡುವ ಮೂಲಕ ಮೂಲಕ ಬರಮಾಡಿಕೊಂಡರು.

ನಂತರ ರಸ್ತೆ ಮೂಲಕ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಗೆ ಅಮಿತ್ ಶಾ ತೆರಳಿದರು. ಅಲ್ಲಿ ವಾಸ್ತವ್ಯ ಹೂಡಿರುವ ಅಮಿತ್ ಶಾ, ನಾಳೆ ಮಂಡ್ಯದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೇ ಮದ್ದೂರಿನ ಗೆಜ್ಜಲಗೆರೆಯಲ್ಲಿ ಮೆಗಾ ಡೇರಿಯನ್ನು ಉದ್ಘಾಟಿಸಲಿದ್ದಾರೆ. ತದನಂತರ ಬೆಂಗಳೂರಿನಲ್ಲಿ ನಡೆಯಲಿರುವ ಸಹಕಾರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. 

Reached Bengaluru on my two-day visit to Karnataka.

bengaluru bengaluru

Looking forward to interacting with the people of Mandya tomorrow in a public meeting. Will also inaugurate Dairy plant in Mandya followed by a Cooperative Conference in Bengaluru in the evening. pic.twitter.com/al6p3x2PaK
— Amit Shah (@AmitShah) December 29, 2022
ರಾಜ್ಯದಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಗಳು ಹಾಗೂ ಪಕ್ಷದ ಸಭೆಗಳಲ್ಲಿ ಭಾಗವಹಿಸಲು ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ @AmitShah ಅವರನ್ನು ಬೆಂಗಳೂರಿನಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.@BJP4India @BJP4Karnataka #OldMysuruWelcomesAmitShah pic.twitter.com/pYdLLMuzJz— Basavaraj S Bommai (@BSBommai) December 29, 2022


bengaluru

LEAVE A REPLY

Please enter your comment!
Please enter your name here