ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್… ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಇದನ್ನು ಓದಿ: ಚಿಕ್ಕಬಳ್ಳಾಪುರ: ನಂದಿಬೆಟ್ಟಕ್ಕೆ 2 ದಿನ ಸಾರ್ವಜನಿಕರ ಪ್ರವೇಶ ನಿಷೇಧ
ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ತೆರಳಿರುವ ರಾಷ್ಟ್ರಪತಿ ಮುರ್ಮು ಅವರು, ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಬಳಿಕ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗವಹಿಸಲಿದ್ದಾರೆ.