ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಬೆಂಗಳೂರಿನಲ್ಲಿ ಗಾಂಧಿ ಕುಟುಂಬ, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇರುವ ಪೋಸ್ಟರ್ಗಳನ್ನು ಎಲ್ಲೆಡೆ ಹಾಕಲಾಗಿದೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಬೆಂಗಳೂರಿನಲ್ಲಿ ಗಾಂಧಿ ಕುಟುಂಬ, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇರುವ ಪೋಸ್ಟರ್ಗಳನ್ನು ಎಲ್ಲೆಡೆ ಹಾಕಲಾಗಿದೆ.
ಕಾಂಗ್ರೆಸ್ನ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಪಕ್ಷದ ಹಾಲಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ನಾಯಕರ ಪೋಸ್ಟರ್ಗಳು ಸಹ ಕಂಡುಬಂದವು.
Posters featuring Gandhi family, Siddaramaiah, Shivakumar put up in Bengaluru ahead of K’taka swearing-in ceremony
Read @ANI Story | https://t.co/Uzw11jWNHB#Karnataka #KarnatakaSwearinginCeremony #Congress pic.twitter.com/vWVzYWrV1M
— ANI Digital (@ani_digital) May 20, 2023
ಕಾಂಗ್ರೆಸ್ ಹಿರಿಯ ನಾಯಕ ಸಿದ್ಧರಾಮಯ್ಯ ಅವರು ಶನಿವಾರ ಮಧ್ಯಾಹ್ನ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
#WATCH | Banners with Karnataka CM-designate Siddaramaiah, Deputy CM-designate DK Shivakumar, former Congress presidents Sonia Gandhi and Rahul Gandhi, current party chief Mallikarjun Kharge & other leaders of the party, seen in Bengaluru.
The swearing-in ceremony will be held… pic.twitter.com/j0qJMeRkmP
— ANI (@ANI) May 20, 2023
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ರ ಸುಮಾರಿಗೆ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸಿಎಂ ಮತ್ತು ಅವರ ಸಂಪುಟಕ್ಕೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಖರ್ಗೆ ತಿಳಿಸಿದರು.
#WATCH | Delhi | “Today is the swearing-in ceremony of the CM, Deputy CM and eight MLAs who will take oath as the ministers (in the state cabinet), everyone is attending it. I am going for the same. It is a matter of delight that a new & strong Congress Govt has come to power in… pic.twitter.com/t0fiEMvX1j
— ANI (@ANI) May 20, 2023
ಕಾಂಗ್ರೆಸ್ ಶಾಸಕರಾದ ಡಾ.ಜಿ. ಪರಮೇಶ್ವರ, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ಮತ್ತು ಬಿ.ಝಡ್. ಜಮೀರ್ ಅಹಮದ್ ಖಾನ್ ಅವರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.
Delhi | A supporter of Karnataka Deputy CM-designate DK Shivakumar sports a tattoo with the leader’s face and name on his chest; also carries a photo depicting the leader as well as other leaders of the Congress party.
Visuals from outside the residence of DK Shivakumar in… pic.twitter.com/87uVTV1uVQ
— ANI (@ANI) May 20, 2023
ಇಂದು ಸಿಎಂ, ಉಪಮುಖ್ಯಮಂತ್ರಿ ಹಾಗೂ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಎಂಟು ಶಾಸಕರು ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನಾನು ಹೋಗುತ್ತಿದ್ದೇನೆ. ಕರ್ನಾಟಕದಲ್ಲಿ ಹೊಸ ಹಾಗೂ ಬಲಿಷ್ಠ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಸಂತಸದ ಸಂಗತಿ. ಇದರಿಂದ ಕರ್ನಾಟಕಕ್ಕೆ ಅನುಕೂಲವಾಗಲಿದೆ ಮತ್ತು ದೇಶದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಕರ್ನಾಟಕಕ್ಕೆ ತೆರಳುವ ಮುನ್ನ ಎಎನ್ಐ ಜತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಾನ ಮನಸ್ಕ ಪಕ್ಷಗಳ ಹಲವು ನಾಯಕರನ್ನು ಕಾಂಗ್ರೆಸ್ ಆಹ್ವಾನಿಸಿದೆ.