Home Uncategorized ಬೆಂಗಳೂರಿನಲ್ಲಿ ಪತ್ರಕರ್ತರಿಗೆ ಸಿಎಂ ಕಪ್ ಕ್ರಿಕೆಟ್ ಟೂರ್ನಿ ಆಯೋಜನೆಗೆ ಚಿಂತನೆ: ಕೆ.ವಿ.ಪ್ರಭಾಕರ

ಬೆಂಗಳೂರಿನಲ್ಲಿ ಪತ್ರಕರ್ತರಿಗೆ ಸಿಎಂ ಕಪ್ ಕ್ರಿಕೆಟ್ ಟೂರ್ನಿ ಆಯೋಜನೆಗೆ ಚಿಂತನೆ: ಕೆ.ವಿ.ಪ್ರಭಾಕರ

31
0

ಮಂಗಳೂರು: ಬೆಂಗಳೂರಿನಲ್ಲಿ ಪತ್ರಕರ್ತರಿಗಾಗಿ ಸಿಎಂ ಕಪ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸುವ ಚಿಂತನೆ ನಡೆಸುವುದಾಗಿ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ತಿಳಿಸಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುತ್ತಿರುವ ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿಯ ಲೀಗ್ ಪಂದ್ಯದ ಸಂದರ್ಭದಲ್ಲಿ ಕ್ರಿಕೆಟ್ ತಂಡಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಮಂಗಳೂರಿನಲ್ಲಿ ಅಚ್ಚುಕಟ್ಟಾಗಿ ನಡೆದಿರುವ ಪತ್ರಕರ್ತರ ಕ್ರೀಡಾಕೂಟವನ್ನು ನೋಡಿ ರಾಜಧಾನಿಯಲ್ಲೂ ಇಂತಹ ಟೂರ್ನಮೆಂಟ್ ಆಯೋಜಿಸುವ ಬಗ್ಗೆ ಸ್ಫೂರ್ತಿ ಉಂಟಾಗಿದೆ. ಕೆಯುಡಬ್ಲ್ಯುಜೆ ಅಧ್ಯಕ್ಷ ಶಿವಾನಂದ ತಗಡೂರು ಅವರಲ್ಲಿ ಟೂರ್ನಮೆಂಟ್ ಆಯೋಜಿಸುವ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು.

ಕ್ರೀಡೆ ಮಾನಸಿಕ ಒತ್ತಡ ನಿವಾರಣೆಗೆ ಉತ್ತಮ ಹವ್ಯಾಸ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಮೂಲಕ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟ ಉತ್ತಮ ಮಾದರಿ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಗ್ರಾಮ ವಾಸ್ತವ್ಯದಂತಹ ತನ್ನ ಸಮಾಜ ಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ಮುಖ್ಯ ಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಗಿರೀಶ್ ಕೋಟೆ, ಮಂಗಳೂರು ಸೆಂಟ್ರಲ್ ಸಬ್‌ಡಿವಿಜನ್ ಎಸಿಪಿ ಮಹೇಶ್ ಕುಮಾರ್, ಜಿಲ್ಲಾ ವಾರ್ತಾ ಧಿಕಾರಿ ಖಾದರ್ ಶಾ, ಪದಾಧಿಕಾರಿಗಳಾದ ಸೋಮಶೇಖರ ಕೆರೆಗೋಡು, ರಾಜ್ಯಕಾರ್ಯಕಾರಿ ಸಮಿತಿ ಸದಸ್ಯರಾದ ಟೆಲೆಕ್ಸ್ ರವಿ,ಉಮೇಶ್ ಮಾರ್ಪಳ್ಳಿ, ಇಬ್ರಾಹೀಂ ಅಡ್ಕಸ್ಥಳ, ಮಹಾರಾಷ್ಟ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕಾರ್ಯದರ್ಶಿ ವಿಜಯ ಕೋಟ್ಯಾನ್, ರಾಜೇಶ್ ಪೂಜಾರಿ , ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೇಶ್ ದಡ್ಡಂಗಡಿ, ವಿಲ್‌ಫ್ರೇಡ್ ಡಿ ಸೋಜ, ಮುಹಮ್ಮದ್ ಆರಿಫ್ ಕೆ, ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಕೆ.ವಿ.ಪ್ರಭಾಕರ್‌ರನ್ನು ಪಂದ್ಯಾವಳಿಯ ಸಂಘಟಕರ ಪರವಾಗಿ ಗೌರವಿಸಿದರು.

LEAVE A REPLY

Please enter your comment!
Please enter your name here