Home Uncategorized ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್‌; 10ಕ್ಕೂ ಹೆಚ್ಚು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್‌; 10ಕ್ಕೂ ಹೆಚ್ಚು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

13
0

ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್‌ (Income Tax raid) ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್‌ (Income Tax raid) ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ನಗರದ ಸರ್‌ ಸಿ.ವಿ. ರಾಮನ್‌ ನಗರ, ಬಾಗಮನೆ ಟೆಕ್‌ ಪಾರ್ಕ್‌, ಹುಳಿಮಾವು ಮೊದಲಾದ ಕಡೆಗಳಲ್ಲಿ ದಾಳಿ ನಡೆದಿದೆ. ಸುಮಾರು 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ನಾನಾ ಕಡೆ ದಾಳಿ ಮಾಡಿದೆ.

ಹುಳಿಮಾವು ಸಮೀಪದ ಆಪಸ್ ಅಪಾರ್ಟ್ಮೆಂಟ್ ಮೇಲೆ ದಾಳಿ‌ ಮಾಡಿರುವ ಐಟಿ ಟೀಂ ಅಲ್ಲಿ ತಪಾಸಣೆಯನ್ನು ನಡೆಸುತ್ತಿದೆ. ಅಲ್ಲದೆ ಹಲವು ಕಡೆಗಳಲ್ಲಿ ದಾಳಿ ನಡೆದಿರುವ ಮಾಹಿತಿ ಇದೆ.ಆದಾಯ ತೆರಿಗೆ ಪಾವತಿಯಲ್ಲಿ ಕೆಲವು ಕಂಪನಿಗಳು ವಂಚನೆ ಮಾಡುತ್ತಿವೆ ಎಂಬುದನ್ನು ಕಂಡುಕೊಂಡಿರುವ ಅಧಿಕಾರಿಗಳು ಕಂಪನಿಯ ದಾಖಲೆ, ಕಡತಗಳ ಪರಿಶೀಲನೆಗಾಗಿ ಈ ದಾಳಿ ನಡೆಸಿವೆ. ತಂಡಗಳು ಕಂಪನಿಗಳ ಕಚೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿವುದಾಗಿ ತಿಳಿದು ಬಂದಿದೆ.

ಹಲವಾರು ಖಾಸಗಿ ಕಂಪನಿಗಳು ಆದಾಯ ತೆರಿಗೆ ವಂಚನೆ ಮಾಡುವುದಕ್ಕಾಗಿ ಎರಡು ರೀತಿಯ ದಾಖಲೆ ನಿರ್ವಹಣೆ ಮಾಡುತ್ತಿರುವುದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಂಡುಕೊಂಡಿದ್ದರು. ಇದು ವಂಚನೆಯ ಪರಿಧಿಗೆ ಬರುತ್ತಿದ್ದು, ತೆರಿಗೆ ತಪ್ಪಿಸುವ ಹುನ್ನಾರವನ್ನು ಬಯಲು ಮಾಡಲು ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ದೊಡ್ಡ ದೊಡ್ಡ ಕಂಪನಿಗಳು ಕೂಡಾ ಈ ವಂಚನೆಯಲ್ಲಿ ಭಾಗಿಯಾಗಿವೆ ಎನ್ನಲಾಗಿದೆ.

ನಿನ್ನೆ ಮಂಗಳವಾರ ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ 62.05 ಕೋಟಿ‌ ಮೌಲ್ಯದ ಸರ್ಕಾರಿ ಭೂಮಿ‌ ಜಪ್ತಿ ಮಾಡಿಕೊಂಡಿದ್ದರು.

LEAVE A REPLY

Please enter your comment!
Please enter your name here